ನಿನ್ನೊರೆಗೆ ನಾ ತಿಳಿಯಲಾರೆ ಪ
ಪನ್ನಗಾದ್ರಿವಾಸ ಶ್ರೀಹರೆ ಅ.ಪ.
ಮಾನವ ನಾನು ಎನ್ನಿಂದ ಸಾಧ್ಯವಿರೆಇನ್ನೂ ಹೆಚ್ಚು ಹೆಚ್ಚು ಭಕುತಿಯನ್ನು ಬೇಡ ಬೇಡ 1
ಬೊಮ್ಮಾದಿ ದೇವತೆಗಳು ಅಮ್ಮ ಲಕುಮಿಯ ಸಹನಿಮ್ಮನ್ನು ತಿಳಿಯರಿನ್ನು ತಿಳಿವ ಹಮ್ಮು ನನಗೇಕೆ ಶೌರೇ 2
ಅನ್ಯಜೀವಿಯಂತರಂಗ ಎಂದೂ ತಿಳಿಯಲಾರೆ ನಾನುಇನ್ನು ಸರಸಿಜಾಮನೊಡಲ ನಿನ್ನ ತಿಳಿವುದೆಂತಹನೇ 3
ಇಷ್ಟೇ ಭಕುತಿಯಿಂದ ನೀನು ತುಷ್ಟನಾಗಿ ಸಲಹಬೇಕುಎಷ್ಟು ಕಷ್ಟಪಟ್ಟರೂ ನಿನ್ನಿಷ್ಟಕೆ ಸರಿ ಹೋಗುವದೆಷ್ಟು 4
ಭಕುತಿಯಲ್ಲಿ ಸತತವಿರಲು ಶಕುತಿಯನ್ನುನ್ನೀಯೊ ಎನಗೆಸಕಲ ಜಗದಿ ಮೆರೆವ ಗದುಗು ವೀರನಾರಾಯಣ5