ಯುಕ್ತಿಯಿಂದ ಭಕ್ತಿ ಮಾಡಲಿಕ್ಕೆ ಶಕ್ತನಲ್ಲ ನಾ
ಮುಕ್ತಿಯೋಗ್ಯ ಮಾಡೊ ಭಾವಭೋಕ್ತ ಕೃಪಾನಿಧೆ ಧ್ರುವ
ಧ್ಯಾನ ಮೌನ ಸ್ನಾನ ಸಂಧ್ಯಾಖೂನ ಗುರುತು ಅರಿಯೆ ನಾ
ನ್ಯೂನ ಪೂರ್ಣ ನೋಡದೆನ್ನ ರಕ್ಷಿಸೋ ದಯಾನಿಧೆ 1
ಹೀನ ದೀನ ಜ್ಞಾನಶೂನ್ಯ ದಾನ ಧರ್ಮ ಅರಿಯೆ ನಾ
ನೀನೆ ಕಾಯಬೇಕು ಎನ್ನ ಕರುಣಾ ಕೃಪಾನಿಧೆ 2
ದುರುಳ ದುರ್ವಾಸನೆಯ ದುರಾಚಾರಿ ದುರಾತ್ಮ ನಾ
ತರಣೋಪಾಯ ದೋರಿಸೆನ್ನ ಹೊರಿಯೊ ದಯಾನಿಧೆ 3
ಅರುಹು ಕುರುಹು ನರಿಯ ದೀಹ್ಯ ಮರುಳಮಂಕ ತರಳನಾ
ಕರವ ಪಿಡಿಯ ಧರೆಯೊಳಿನ್ನು ತಾರಿಸೊ ದಯಾನಿಧೆ 4
ಆಶಾಪಾಶದೊಳು ವಾಸವಾದ ದೋಷ ರಾಶಿ ನಾ
ಭಾಸಿ ಪಾಲಿಸು ಪುಣ್ಯ ಪ್ರಕಾಶಿಸೊ ದಯಾನಿಧೆ 5
ಏಸು ಜನ್ಮ ಮೋಸಹೋಗಿ ಘಾಸಿಯಾದ ಜೀವ ನಾ
ದಾಸರೊಡನೆ ಕೂಡಿಸೊ ಭಾಸ್ಕರ ದಯಾನಿಧೆ 6