ಉಗಾಭೋಗ
ಭಕ್ತಿದಾಯಕ ಕೇಳೊ ನಿನ್ನನು ಒಲಿಸಲು
ಶಕ್ತಿ ಎನಗೆ ಇಲ್ಲ ಸರ್ವೇಶ್ವರ
ಭಕ್ತಿಪಾಶದಿ ನಿನ್ನನುಕ್ತಿಯಿಂದಲಿ ಬಿಗಿವೆ
ಮುಕ್ತಿಗೊಡೆಯ ಹೃದಯ ಮಧ್ಯದಿ ಬಂಧಿಸುವೆ
ಶಕ್ತಿ ನಿನಗಿಲ್ಲ ಬಿಡಿಸಿಕೊಳ್ಳಲು ಇನ್ನು
ಯುಕ್ತಾಯುಕ್ತ ತಿಳಿಸಿ ಉದ್ಧರಿಸಬೇಕಿನ್ನು
ಶಕ್ತನಿಲ್ಲವೊ ನಿನಗೆ ಸರಿ ಜಗದೊಳು ಮಹ
ಸಿರಿ ಗೋಪಾಲಕೃಷ್ಣವಿಠ್ಠಲಾ