ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ