ತ್ರಿವಿಕ್ರಮರಾಯನ ನಂಬಿರೊಭುವನದೊಳ್ ಭಾಗ್ಯವ ತುಂಬಿರೊಸವೆಯದ ಸುಖವ ಮೇಲುಂಬಿರೊ ವಾ-ಸವನ ಮನ್ನಣೆಯ ಕೈಕೊಂಬಿರೊ ಪ.
ವಾದಿರಾಜಗೊಲಿದುಬಂದನ ಚೆಲ್ವಸೋದೆಯ ಪುರದಲ್ಲಿ ನಿಂದನಸಾಧಿಸಿ ಖಳರನು ಕೊಂದನ ತನ್ನಸೇರ್ದಜನರ ಬಾಳ್ ಬಾಳೆಂದನ 1
ಕಾಲಿಂದ ಬೊಮ್ಮಾಂಡ ಒಡೆದನ ಪುಣ್ಯ-ಶೀಲೆ ಗಂಗೆಯನು ಪಡೆದನಪಾಲಸಾಗರವನ್ನು ಕಡೆದನ ಶ್ರುತಿ-ಜಾಲ ಗದೆಯಿಂದ ಹೊಡೆದನ 2
ಇಂದಿರಾದೇವಿಯ ಗಂಡನ ಸುರಸಂದೋಹದೊಳು ಪ್ರಚಂಡನಇಂದ್ರಾದಿ ಗಿರಿವಜ್ರದಂಡನ ಮುನಿವೃಂದಾರವಿಂದಮಾರ್ತಾಂಡನ3
ಕಂಬುಕಂಧರ ಮಂಜುಳಗಾತ್ರನವೃಂದಾರಕರಿಗೆ ನೇತ್ರನ ಜಗಕಿಂದೇ ಸುಪವಿತ್ರನ 4
ವನಿತೆಯರರ್ಥಿಯ ಸಲಿಸದೆ ಮನೆಮನೆವಾರ್ತೆಯ ಹಂಬಲಿಸದೆದಿನ ದಿನ ಪಾಪವ ಗಳಿಸದೆ ಅಂತ-ಕನ ಭಟರಿಂದೆಮ್ಮ ಕೊಲಿಸದೆ 5
ಹರಿಭಕುತರೊಳೆಂದೆಂದಾಡಿರೊ ನರ-ಹರಿಯ ನಾಮಗಳನು ಪಾಡಿರೊಹರಿಯರ್ಚನೆಯನು ಮಾಡಿರೊ ಶ್ರೀ-ಹರಿಯ ಮೂರುತಿಯ ನೋಡಿರೊ 6
ದೂರಕ್ಕೆ ದೂರನು ದಾವನ ಹ-ತ್ತಿರ ಬಂದ ಭಕುತರ ಕಾವನ ಆರಾಧಿಸಲು ಫಲವೀವನ ಹ-ತ್ತಿರ ಸೇರುವ ಭಾವ ದಾವನ 7
ಕಾಮದೇವನ ಪೆತ್ತ ಕರುಣಿಯ ಸುತ್ತಸೇವಿಪರಘತಮ ತರಣಿಯ- - - - - - - - - - - - - - - - - - - -8
ಜಯಿಸಿ ಕಂಸನೆಂಬ ಮಾವನ ಭಯವಿತ್ತು ಭಕುತ ಸಂಜೀವನಹಯವದನನಾಗಿ ಪಾವನ ಶ್ರು-ತಿಯ ತಂದ ದೇವರದೇವನ 9