ರಂಗನಾಥ ಪಾಲಿಸೆನ್ನ ಮಂಗಳಾಂಗ ಶ್ರೀಶ ಬೇಗ ಪ
ನಿನ್ನ ಭಜನೆಯನ್ನು ಗೈವೆ ಪನ್ನಗಾರಿವಾಹ ಹರೆ
ಸ್ವರ್ಣವಸನ ಭೂಷಿತಾಂಗ ಸನ್ನುತಾಂಗ ಧೀರಶೂರ 1
ದುಷ್ಟರನ್ನು ಶಿಕ್ಷಿಸುತ್ತ ಸೃಷ್ಟಿಗೊಡೆಯನೆನಿಸಿ ನೀನು
ಇಷ್ಟ ವರಗಳನ್ನು ಕೊಟ್ಟು ಶ್ರೇಷ್ಟನೆನಿಸು ನಂಬಿದೆನು 2
ಕಾಮಿತಾರ್ಥ ಫಲಗಳೀವ ಕಾಮ ಜನಕ ದೇವನೆ
ಧೇನುನಗರದಲ್ಲಿ ನೆಲಸಿ ನೇಮದಿಂದ ಪೂಜೆಗೊಂಬೆ 3