ಜನಿಸಿ ನಾ ಬುವಿಯೊಳು ನಿನಗೆ ದುಡಿಯುವುದಾಯ್ತು
ಎನಗೇನುಫಲ ಪೇಳು ಮಾಯವೆ ಎಲೆ ಜೀವವೆ ಪ
ನಿನಗೆ ನೀ ದುಡಿಯುವಿ ಎನಗೆ ದುಡಿಯುವುದೇನು
ದಿನಸರಿಯದೆನುವುದು ನ್ಯಾಯವೆ ಎಲೆ ಕಾಯವೆ ಅ.ಪ
ಘನರೋಗ ತಾಪತ್ರವನುಭವಿಸುವುದೆಲ್ಲ
ನಿನಗಾಗಲ್ಲೇನು ಪೇಳು ಮಾಯವೆ ಎಲೆ ಜೀವವೆ
ನಿನಗೆ ಬಂದ ಕರ್ಮವನುಭವಿಪೆಯಲ್ಲದೆ
ಎನಗಾಗೆನುವುದು ನಿಜನ್ಯಾಯವೆ ಎಲೆ ಕಾಯವೆ 1
ಬನ್ನ ಬಡುವೆನಲ್ಲ
ಕರ್ಮ ಮಾಯವೆ ಎಲೆ ಜೀವವೆ
ಎನ್ನ ಜೋಪಾನವು ನಿನ್ನಿಂದಲೆಂಬುವುದು
ಮಣ್ಣುಗೊಂಬೆ ನಿನಗೆ ನ್ಯಾಯವೆ ಎಲೆ ಕಾಯವೆ 2
ಚಳಿಮಳೆಬಿಸಿಲಿನ ಬಲುತಾಪದಲಿ ನಿನ್ನ
ಸಲಹುವರಾರ್ಹೇಳು ಮಾಯವೆ ಎಲೆ ಜೀವವೆ
ಚಳಿಮಳೆಬಿಸಿಲಿನ ಬಲುತಾಪ ಎನಗೆಲ್ಲಿ
ಎಲುವಿನ್ಹಂದರ ನಿಂದೀನ್ಯಾಯವೆ ಎಲೆ ಕಾಯವೆ 3
ಭಿನ್ನ ಮಾತುಗಳೇನೋ ಮಾಯವೆ ಎಲೆ ಜೀವವೆ
ನಿನ್ನದು ದಾವೂರು ನನ್ನದು ದಾವೂರು
ಎನ್ನ ಸರಿಗಟ್ಟುವುದು ನ್ಯಾಯವೆ ಎಲೆ ಕಾಯವೆ 4
ನಾನಿಲ್ಲದಿರೆ ನಿನ್ನ ಖೂನವರಿವರಾರು
ನೀನೆ ಪೇಳೆಲೋ ನಿಜ ಮಾಯವೆ ಎಲೆ ಜೀವವೆ
ಹೀನನೆ ನೀನೆನ್ನ ಖೂನವರಿಯದೆ ಬಿನಗು
ಶ್ವಾನನಂತೊದರುವುದು ನ್ಯಾಯವೆ ಎಲೆ ಕಾಯವೆ 5
ಹೊನ್ನೂ ಹೆಣ್ಣು ಮಣ್ಣು ಎನ್ನಿಂದ ಪಡೆದು ನೀ
ಧನ್ಯನೆನಿಸುವೆಯಲ್ಲ ಮಾಯವೆ ಎಲೆ ಜೀವವೆ
ನಿನ್ನಗದರ ಫಲ ಎನ್ನಗೇನೆಲೆ ಪಾಪಿ
ನಿನ್ನ ಮೋಹಿಸಿ ನಾನು ಕೆಡುವೆ ಎಲೆ ಕಾಯವೆ 6
ಎನ್ನಿಂದ ಕೆಡುವೆನೆಂಬನ್ಯವಾದವು ಬೇಡ
ನಿನ್ನದೆಲ್ಲವ ಬಲ್ಲೆ ಮಾಯವೆ ಎಲೆ ಜೀವವೆ
ಬನ್ನ ಬಡುವೆ ಸತತ
ಎನ್ನನರಿವುದು ನಿನ್ನಗಳವೇ ಎಲೆ ಕಾಯವೆ 7
ಹೇವನಿನಗ್ಯಾಕಿಷ್ಟು ಸಾವುತ್ಹುಟ್ಟುತ ನೀನು
ನೋಯುವುದ ಬಲ್ಲೆ ನಾ ಮಾಯವೆ ಎಲೆ ಜೀವವೆ
ಹೇವದಮಾತಲ್ಲ ಸಾವುಹುಟ್ಟೆನಗಿಲ್ಲ
ಕೇವಲನಾದಿಕಾಲದಿರುವೆ ಎಲೆ ಕಾಯವೆ 8
ಕೇವಲನಾದಿಯು ಜೀವ ನೀನಾದರೆ
ದೇವರೆ ನೀನಿದ್ದಿ ಮಾಯವೆ ಎಲೆ ಜೀವವೆ
ದೇವರು ನಾನಲ್ಲ ದೇವ ಶ್ರೀರಾಮನ
ಕೇವಲದಾಸ ನಾನಿರುವೆ ಎಲೆ ಕಾಯವೆ 9