ಭಾರತೀಪತಿ ಮೂರುತಿ ಮಾರುತಿ ಕಾಯೊ ಪ
ಘೋರದುರಿತೌಘ ಪರಿಹಾರ ಸುಸಮೀರ ಧೀರಾ ಅ.ಪ
ಸತ್ತ್ವ್ವ ಸತ್ತ್ವಾತ್ಮಕ ತತ್ತ್ವದೇವತೆಗಳ
ನಿತ್ಯ ನಿಯಾಮಕ ಗುರು 1
ಪಟುತರಾಂಗನೆ ಧೂರ್ಜಟಿಯ ಸೇವೆಗೆ ಮಚ್ಚಿ
ಪರಮೇಷ್ಠಿ ಪದ 2
ನಂಜಯನಾಗ್ರಜನೆ ಮೂರ್ಜಗ ಗುರು 3
ಶ್ರೇಷ್ಠಮೂರುತಿ ಜಗಚ್ಚೇಷ್ಟಾಪ್ರದಾಯಕ
ಪ್ರವಿಷ್ಠ ಸರ್ವಸೃಷ್ಟಿಕಾರ್ಯ ತೊಟ್ಟಿರುವೆ4
ಮುಖ್ಯವಾಚ್ಯನು ದೇವ ಅಮುಖ್ಯವಾಚ್ಯನು ನೀನು
ಮುಖ್ಯ ಜೀವಕೋಟಿಯೊಳು ಪ್ರಮುಖನಯ್ಯ ಮುಖ್ಯಪ್ರಾಣ5
ಶ್ವಾಸನಿಯಾಮಕ ನಿಶೆಯೊಳು ನಿದ್ರೆಯೊಳು
ಅಸುರಾದಿ ಜೀವರೊಳು ಶ್ವಾಸಭೂರ್ಭುವನೆನಿಸುವೆ 6
ಸರ್ವನಿಯಾಮಕ ಶರ್ವರೊಂದಿತಪಾದ
ಸರ್ವೋತ್ತಮ ಶ್ರೀ ವೇಂಕಟೇಶನೋರ್ವನೆ ಮುಖ್ಯನೆಂದೆ7