ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ಪ
ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನುಅ
ತರಳ ಪ್ರಹ್ಲಾದ ಹರಿ ವಿಶ್ವಮಯನೆಂದುಬರೆದೋದಲವನ ಪಿತ ಕೋಪದಿಂದಸ್ಥಿರವಾದಡೀ ಕಂಬದಲಿ ತೋರು ತೋರೆನಲುಭರದಿಂದ ಬರಲದಕೆ ವೈಕುಂಠ ನೆರೆಮನೆಯೇ1
ಪಾಪ ಕರ್ಮವ ಮಾಡಿದಜಮಿಳನ ಯಮಭಟರುಕೋಪದಿಂದೆಳೆಯುತಿರೆ ಭೀತಿಯಿಂದತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತದ್ವೀಪವೀ ಧರೆಗೆ ಸನಿಹದಲ್ಲಿಹುದೆ 2
ನೆಗಳು ನುಂಗುತಿರೆ ಭಯದಿಂದಮೊರೆಯಿಡಲು ಕೇಳಿ ತ್ವರಿತದಲಿ ಬಂದುಕರುಣದಲಿ ಬಂಧನವ ಪರಿಹರಿಸೆ ಗಜರಾಜನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ 3
ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆತರುಣಿ ಹಾ ಕೃಷ್ಣ ಎಂದೊದರೆ ಕೇಳ್ದುಭರದಿಂದ ಅಕ್ಷಯಾಂಬರವೀಯೆ ಹಸ್ತಿನಾಪುರಿಗೆ ದ್ವಾರಾವತಿಯು ಕೂಗಳತೆಯೆ 4
ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯಗಣನೆಯಿಲ್ಲದ ಮಹಾಮಹಿಮನೆನಿಪಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನುನೆನೆದವರ ಮನದೊಳಿಹನೆಂಬ ಬಿರುದುಂಟಾಗಿ5