ಹೃದಯ ವೃಂದಾವನದೊಳಿರುವ ಕೃಷ್ಣನ
ಸಾಧಿಸಿ ನೋಡ್ವೆನೆಂದು ಪೋದರು ಗೋಪಾಂಗನಾ ಪ
ನಾದದ ಕೊಳಲನ್ನು ಊದುವ ವೇಳ್ಯದಿ
ಸದ್ಭಕ್ತಿವೆತ್ತಿಗೋಪಾಂಗನಾ ವಿನೋದದಿ
ಆಧಾರ ಮಾರ್ಗದಿಂದಾ ಪೋದರು ಬೇಗದಿ
ಶೋಧಿಸಿ ನೋಡಲಾಗಿ ತ್ಯಾಗಿಸಿ ಕಾಮನಾ 1
ಉಬ್ಬೇರಿ ಮೆಲ್ಭಾಗದಿಂದಾ ವಿನೋದದಿ
ಅಬ್ಬರದಿಂದಲೀ ಆ ಷಟದ್ವಾರ ಭೇದದಿ
ಗರ್ಭಿತನಾದ ರಾಜಹಂಸೊಹಂಸ್ವರದಿ
ಮುಬ್ಬರದಿಂದಲಿ ಪಾಡುತ್ತಾ ರಂಗನ 2
ನಳಿನ ಚಂಪಕಾದಿ ನಾಗ ಪುನ್ನಾಗವು
ಕುಂದ ಬಕುಲವು
ಮಾಲತಿ ಜಾಜಿ ಹೂವು ಶ್ರಿಲೋಲನಾಮವೂ
ಮೇಳಿತವಾಗಿ ಪೋಗಿ ಏರಿದರು ಸುಮನಾ 3
ಮೂರ್ತಿ ಸಂಗೀತ ಕೇಳುತಾ
ಆ ಮಹಾ ಮಕುಟದಾ ಬೆಳಕು ನೋಡುತಾ
ಶ್ರೀ ಗುರುಮಹಾದೇವನೊಳ್ ರಮಿಸಿ ಸೂಸದಾ
ಪ್ರೇಮದಿ ಶಾಂತಿ ಸುಖದೊಳ್ ಬೆರತು ಸಘನಾ 4