ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರಹೇಳಮ್ಮಾ ಭಾವೇ ಮನೆಗೆ ಬಿರದಂಕ ಹರಿಯಾ| ಚರಣವನ್ನು ಗಾಣದೆನ್ನ ಚಿತ್ರನೆಲೆ ಗೊಳ್ಳದಮ್ಮಾ ಪ ಬಾಲೆಕೇಳೆ ಕುಂತಳೆ ಬೇಸರ ವಿದೇನೇ| ಪಾಲಗಡಲ ಮನೆಯಾ ಬಿಟ್ಟು ಪವನಾಹಾರನ ಪರ್ಯಂಕವನು| ಜಾಳಿಸಿ ತಾನ್ಯಾಕ ಪೋದನೇ ಜಲರುಹ ನಾಭ| ಕಾಲಿಲಲ್ಲದವನಾಗಿ ಕೊಂದು ತಮನನೀಗಿ| ಮ್ಯಾಲಗಿರಿಯ ಪೊತ್ತ ಮರರಿಗ ಮೃತವಿತ್ತಾ| ಭೂಲಲನೆ ಬಡಿಸಿ ಭೂವರಾಹೆನಿಸಿ| ಬಾಲಕರಿಯಲು ರೂಪ ಬೆಡಗಾ ವಿಡಿಸು 1 ಉಡುರಾಜದವನೆ ಕೆಳದೀ ಉನ್ನತಿಯ ನೋಡೇ| ಷಡ್ಗುಣೈಶ್ವರ್ಯವುಳ್ಳಾ ಸುರಮುನಿಸೇವಿತ ಪಾದಾ| ಬೇಡಿ ಭಾಗ್ಯವ ನೀಡುವ ಬಲುದೊರೆ ತಾನಾಗಿ| ಬಡಹಾರುವನಂತೆ ಭೂಮಿ ಬೇಡಿದನಂತೆ| ಕೊಡಲಿಪಿಡಿದರೆ ಸಕುಲ ಮಾಡಿದ ನಾಶಾ ವಡನೆ ವಾನರ ಸಂಗ ವಿರಹರಿಸಿ ಸುರತುಂಗಾ| ತುಡುಗತನದಿ ಬೆಣ್ಣೆತಿನ್ನುವರೆ ರನ್ನೆ 2 ಕರಿರಾಜ ಗಾಮಿನೀ ಕಿರೀಟ ಕುಂಡಲದಾ ಶಿವತ್ವಕುಂಡಲದಿಂದಾ| ಪರಮಪುರಷದೇವನು ಪೀತಾಂಬರಧಾರೀ| ಬರಿಯ ಬತ್ತೆಲೆಯಾಡಿ ಬೌದ್ಯರೋಳಗ ಕೂಡೀ| ತುರಗೀರಿಯ ವನರ ತುಳಿಸುತ ಸುರವರ ಮೊರೆಗೇಳಿ ಬಂದನು ಮನದೊಳು ನಿಂದನು| ಗುರು ಮಹಿಪತಿ ಪ್ರೀಯಾ ಗುಣಗಣನಿಲಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು