ಶ್ರೀ ಗುರುಮಹಾರಾಯಾ ದಮ್ಮಯ್ಯ ನಿನ್ನ ಪಾದಕೆ ಬಿದ್ದೆನು
ತೋರಿಸೋ ಶ್ರೀ ಗುರುನಾಥಾ ಪ
ತೋರುವ ತೋರಿಕೆಗಳೆಲ್ಲವ ಹಿಂಗಿಸೋ ಷಡ್ವೈರಿಗಳಾಗಿಹ
ಚೋರರ ಬಾಧೆಯ ಬಲವನು ಭಂಗಿಸೋ ತತ್ವಾಮೃತ
ಸಾರ ನಿತ್ಯಸುಖದೊಳನ್ನ ನಿಲ್ಲಿಸೋ 1
ಅಮೃತಾನ್ನವ ಮುಂದಿಡೋ
ಜೋಡಾಗದ ಊಟವನ್ನುಣ್ಣಿಸೋ ನವನೂತನವಾಗಿಹ
ಆಡದಿರುವ ಆಟವಾಡಿಸೋ ನಿನ್ನರ್ಚನೆ ಪೂಜೆಯ
ಮಾಡುವಾನಂದವುದಯ ಮಾಡಿಸೋ 2
ಚರಣತೀರ್ಥ ಪ್ರಸಾದವನು ಕೃಪೆಮಾಡೋ ಸಜ್ಜನರಾ
ಸ್ಮರಣೆಯ ಕರ್ಣಾಭರಣವ ನೀಡೋ ನಾನಾಮೃತದ
ಚರಣ ರಜಪ್ರಕಾಶದೊಳಿಡೋ ವಿಮಲಾನಂದ
ವಿಧಿ ನೋಡೋ 3