ಮಟ್ಟುದೊರಿತು-ನಿನ್ನ ಗುಟ್ಟು ಹಾರಿತು ಪ
ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ
ಅಷ್ಟಸಿದ್ಧಿಗಳಿದ್ದರೂ ವೊಂದಿಷ್ಟುಕೊರತೆ ಕೃಷ್ಣನೆಂಬ 1
ಹೇಯ ಗುಣವಿಲ್ಲ ಮುನಿ-ಗೇಯ ನಿನ್ನೊಳೆಂಬ ಜನರ
ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ ||ಮಟ್ಟು|| 2
ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ
ದತ್ಯಧಿಕ-ಕೊರತೆಯೆಂಬ ||ಮಟ್ಟು|| 3
ಜ್ಞಾನವಂತನೆಂದು ಬಹುಮಾನವಂತನಾದರೂ ಅ
ಜ್ಞಾನ ಶೂನ್ಯನೆಂಬ ದೊಡ್ಡ ಹಾನಿಯೊಂದಿರುವದೆಂಬ4
ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ
ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ5
ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ
ಪಾಪಗಳ ನಪಹರಿಪ ದೀಪನಾ ಬಿಡದು ಎಂಬ ||ಮಟ್ಟು||6
ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರುವ ನಿನಗೆ ಆ
ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ ||ಮಟ್ಟು||7
ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ
ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ ||ಮಟ್ಟು||8
ನಿತ್ಯ ತೃಪ್ತನಾದರೂ ನಿಜ-ಭೃತ್ಯರನ್ನು ಪಾಲಿಸುವ
ನಿತ್ಯ ಕರ್ಮದಲ್ಲಿ ಕೃತಕೃತ್ಯನು ನೀನಲ್ಲವೆಂಬ 9
ಕಷ್ಟಪಡಬೇಡವೆನ್ನೊ-ಳೆಷ್ಟು ದುರ್ಗುಣಂಗಳಿಹ
ವಷ್ಟನು ವೊಪ್ಪಿಸಿ ನಿನಗಿಷ್ಟನಾಗಬೇಕೆಂಬ ||ಮಟ್ಟು|| 10
ಕ್ಷೀರದಧಿನವನೀತ-ಚೋರನಾಗಿರಲಿ ಗೋಪೀ
ಜಾರನಾಗಿರಲಿ ಸಂಸಾರವೈರಿಯು ನೀನೆಂಬ ||ಮಟ್ಟು||11
ಕೊರತೆಯೆಂಬಾಜನರಿಗೆಲ್ಲ-ವರವನಿತ್ತು ಪೊರೆವೆನೆಂಬ
ವರದವಿಠಲನೆಂಬ ||ಮಟ್ಟು|| 12