ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂಥಾದೆಲ್ಲದೆ ತಾಂ ನೋಡಿ ಸತ್ಸಂಗದಸುಖಾ ಇಂಥಾ ಅಂಥಿಂಥವರಿಗಿಂಥಾದೈಲ್ಲದೆ ನೋಡಿ ಧ್ರುವ ಒಂದೊಂದುಪರಿ ಕೇಳಿಸುವ ಹ ನ್ನೊಂದರ ಮ್ಯಾಲಿನ್ನೊಂದರ ಘೋಷ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಮಿಡುಗತಿಹ್ಯ ಆನಂದಸುಖ 1 ಉದಯಾಸ್ತಿಲ್ಲದೆ ಬೆಳಗಿನ ಪ್ರಭೆಯು ತುದಿಮೊದಲಿಲ್ಲದೆ ತುಂಬಿತು ಪೂರ್ಣ ಬುಧಜನರನುದಿನ ಸೇವಿಸುತಿಹ್ಯ ಸದಮಲವಾದ ಸದಾ ಸವಿಸುಖ2 ವಿಹಿತ ವಿವೇಕದ ಅನುಭವಗೂಡಿ ಬಾಹ್ಯಾಂತ್ರದ ಘನದೋರುತಲಿಹ್ಯ ಸ್ವಹಿತಸುಖದ ಸುಧಾರಸಗರೆವ ಮಹಿಪತಿಗುರು ಕರಣದ ಕೌತುಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧುರ ಮಹಿಮೆಯು ಸಾಧಿಸದೆ ತಿಳಿಯದು ಭೇದಿಸದಲ್ಲದೆ ಹೊಳೆಯದಿದು ಧ್ರುವ ತೆಂಗಿನ ಫಲದಂತವರ ಸಂಗದಸುಖ ಹಿಂಗದಂತನುದಿನ ಅನುಭವಿಸುವದಲ್ಲದೆ 1 ಬಂಡೆಯೊಳಿದ್ದದ ತಾ ಒಡೆದು ಪ್ರಾಶಿಸಿದಂತೆ ಕಡಲೊಳಗಿದ್ದ ರತ್ನ ಮುಳುಗಿ ತೆಗೆದಂತೆ 2 ಅಂತರಾತ್ಮದ ಸುಖ ಮಹಾತ್ಮರಗಲ್ಲದೆ ಮೂಢಾತ್ಮರಿಗಿದು ಎಲ್ಲಿಹುದು 3 ಸಾಧು ಸಂತರ ನಿಜದಾಸ ಮಹಿಪತಿಗಿನ್ನು ಸಾಧು ಸಂಗತಿ ಜೀವನ್ಮುಕ್ತಿಯು 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು