ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನುಂಟೇನಿಲ್ಲ ಗುರುಕೃಪೆಯಿಂದ ತನುಮನಿಟ್ಟದೇ ಪಡಕೊಂಬುದು ಚಂದ ಧ್ರುವ ಸುಖ ಸುರುತದೆ ನೋಡಿ ಬಲುಬ್ರಹ್ಮಾನಂದ ಪ್ರಕಟಸಲಿಕ್ಕೆ ಬಾರದು ಮುಖದಿಂದ ಸಕಲವೆಲ್ಲಕೆ ಮೇಲು ತಿಳಿಯಬೇಕಿದೊಂದೆ ಶುಕಾದಿ ಮುನಿಗಳದಾರಿದರಿಂದೆ 1 ಸಿದ್ಧ ಬುದ್ಧ್ದರಿಗೆ ಸಾದ್ಯವದೆ ಸಿದ್ಧ ನೋಡಿ ಬುದ್ಧಿವಂತರಿಗೆ ಒಲಿದುಬಾಹುದು ಕೈಗೂಡಿ ಸನ್ಮಾರ್ಗ ಸುಪಥವಿದೆ ಸದ್ಗುರು ಸೇವೆಮಾಡಿ ಸದ್ಭ್ಬಾವದಿಂದಲಿ ಸ್ವಸುಖವೆ ಸೂರ್ಯಾಡಿ 2 ಭಾಸ್ಕರ ಗುರುದಯದವಗಿನ್ನೇನು ಭಾಸುತೀಹ್ಯದಾವಗಿನ್ನು ನಿಜಕಾಮಧೇನು ವಿಶ್ವದೊಳಗವನೊಬ್ಬ ಸಿದ್ಧತಾನು ದಾಸಮಹಿಪತಿಗಿದೇ ಅಭಿನವಧೇನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆಯಿಂದ ಅನುಭವಿಸಲು ಬ್ರಹ್ಮಾನಂದ ಧ್ರುವ ಶಿಖಾಮಧ್ಯದಲಿ ಪೂರ್ಣ ಸುಖಗರವುತಲ್ಯದೆ ಸಂತ್ರಾಧಾರಿ ಸಕಲವೆಲ್ಲಕೆ ಸನ್ಮತವಾಗಿ ತೋರುವದೊಂದೇ ಪರಿ ಶುಕಾದಿ ಮುನಿಗಳು ಪ್ರಕಟಿಸಿ ಹೇಳಿಹರು ಖೂನದೋರಿ ಬೇಕಾದರೆ ಇದು ನೋಡಬೇಕು ಷಡುಚಕ್ರವೇರಿ 1 ಸಾಮಾನ್ಯವಲ್ಲವಿದು ಸಹಸ್ರ ಕೋಟಿಗೊಬ್ಬ ಬಲ್ಲ ಖೂನ ಕಾಮಾಂಧದೊಳಗಿದ್ದ ಮನುಜ ಪ್ರಾಣಿಗಳು ಬಲ್ಲವೇನ ತಾಮಸಿಗಳಿಗಿದು ತಾರ್ಕಣ್ಯವಾಗುವದಲ್ಲ ಗಮ್ಯಸ್ಥಾನ ಸ್ವಾಮಿ ಸದ್ಗುರು ದಯಮಾಡಿದರಹುದು ಸಮ್ಯಗಜ್ಞಾನ 2 ಶಿರೋರತ್ನವಾಗಿ ವಂದಿಸಿಕೊಂಬುವದಿದೆಲ್ಲಕೆ ಪೂಜ್ಯ ಹರುಷಗೈಸುವ ಪುಣ್ಯ ಪರಮ ಭಕ್ತರಿಗಿದೆವೆ ಸಾಯೋಜ್ಯ ತರಳ ಮಹಿಪತಿಗಿದೆ ಸ್ವ ಸುಖದೋರುವ ಸುಸಾಮ್ರಾಜ್ಯ ಶಿರದಲಿ ಕರವಿಟ್ಟು ತೋರಿದ ಗುರು ಭಾನುಕೋಟಿತೇಜ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು