ಮಧುಪುರದ ವಿಘ್ನೇಶ ದೇವ ಜಗದೀಶ ಫ
ಪುರುಷಪಿತನಮಿತ
ಕಮಲ ಗಿರಿಜಾತೆಯಣುಗಾದಿತ್ಯ ಕೋಟಿ ಪ್ರಕಾಶ
ಕರಿವದನ ಕರುಣನಿಧಿ ಸಮುದ್ರ ಬಹುಕ್ಷಿಪ್ರ 1
ಭರದಿಂದ ರಕ್ಕಸ ಪುರವನು ದಹನಮಾಡೆ
ಹರ ಮೊದಲು ನಿಮ್ಮನು ಅರ್ಚಿಸಿ ಮೆಚ್ಚಿಸಿ
ಹರಿ ವಿರಂಚಾದಿಗಳೆಲ್ಲ ಜಯ ಜಯವೆನಲು ವರವಿತ್ತು
ಮೆರೆದೆ ಗಣನಾಥ ವಿಖ್ಯಾತ 2
ಅರರೆ ನಿಮ್ಮ ಮಹಿಮೆಯನು ಪೊಗಳಲೆನಗಳವಲ್ಲ
ಧರಣಿಯ ಪೊತ್ತಿಹ ಶೇಷಗರಿದು
ಹರನಸುಕುಮಾರ ಸಕಲಾಗಮಕೆ ಸಾಕಾರ
ಧರೆಯೋಳ್ ಮಧುಪರ ವಿಘ್ನೇಶ 3