ಸಕಲವೆನಗೆ ನೀನೆ ಶ್ರೀಹರಿಯೆ ಧ್ರುವ
ತಂದೆತಾಯಿ ಸ್ವಹಿತಾತ್ಮನು ನೀನೆ
ಬಂಧು ಬಳಗ ಸರ್ವಾತ್ಮನು ನೀನೆ 1
ದೈವಗುರು ಕುಲಗೋತ್ರನು ನೀನೆ
ಕಾವ ಕರುಣ ಸೂತಾಂತ್ರನು ನೀನೆ 2
ದ್ರವ್ಯ ಧನವು ಸಕಲಾಶ್ರಯ ನೀನೆ
ದಿವ್ಯಾಲಂಕೃತ ಭೂಷಣ ನೀನೆ 3
ಭಾಸ್ಕರಕೋಟಿ ಸುತೇಜರೂಪನು ನೀನೆ 4
ಮಹಿಪತಿ ಮನೋಹರ ಮೂರ್ತಿಯ ನೀನೆ
ಸಾಹ್ಯ ಸಕಲ ಸಾರ್ಥಿಯು ನೀನೆ 5