ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಊಟವನು ಮಾಡು ಬಾ ಉದಧಿಶಯನಾ | ಆಟವನು ಸಾಕುಮಾಡಿ ಅತಿ ವೇಗದಿಂದಲಿ ಪ ಪರಿ | ತೋಯ ಸಂಡಿಗೆ ಪಳದೆ ಹುಳಿ ಸಾರು || ಪಾಯಸ ನೊರೆಹಾಲು ಸಕ್ಕರೆಗೂಡಿಸಿ | ತಾಯಿ ದೇವಕಿಯು ಎಡೆಯ ಮಾಡಿದಳು ತಂದು 1 ಯಾಲಕ್ಕಿ ಹಾಕಿದ ಹೋಳಿಗೆಯು ಪರಿಮಳ | ಸಲೆ ಶಾಲ್ಯೋದನ ಕರಿದ ಭಕ್ಷ್ಯಾ || ಮೇಲಾದ ಇಂಗು ಜೀರಿಗೆ ಮೆಣಸಿನ ಹುಗ್ಗಿ | ಶ್ರೀ ಲಕುಮಿದೇವಿ ಎಡೆ ಮಾಡಿದಳು ತಂದು 2 ಕಸಕಸಿ ಎಳ್ಳು ಲಡ್ಡಿಗೆಯು ಅಪ್ಪಾಲು ಅರೆ-| ರಸ ದೋಸೆ ಬೆಣ್ಣೆ ಸೂಸಲುಕಡಬು || ಹಸನಾಗಿ ಕರಿದ ಹಪ್ಪಳ ಸಂಡಿಗೆ ನಿನ್ನ ಸೊಸೆ ಸರಸ್ವತಿ ಎಡೆ ಮಾಡಿದಳು ತಂದು 3 ಕಾದಾಕಳ ತುಪ್ಪ ಅಳಗಳಗ ತಿಳಿತುಪ್ಪ | ಮಾಧುರ್ಯವಾಗಿದ್ದ ಜೇನು ಘೃತವು || ಕಾದಾರಿದ ಪಾಲು ಕಟ್ಟುಸುರು ಕೆನೆಮೊಸರು | ಭೂದೇವಿ ನಲಿನಲಿದು ಎಡೆ ಮಾಡಿದಳೊ ತಂದು4 ಸರಳಿಗೆ ಗೌಲಿ ಬಟಿವೆ ಪರಡಿ ಸಜ್ಜಿಗೆ | ಸರಸವಾಗಿದ್ದ ಚಿತ್ರಾನ್ನಂಗಳು || ಪರಿ ಫಲ ಪಕ್ವಾನ್ನ ಸೋಪಚಾರದಿ | ಗಿರಿಜಾದಿಗಳು ತಾವು ಎಡೆ ಮಾಡಿದರೊ ತಂದು5 ಖಾರುಳ್ಳ ಪಚ್ಚಡಿ ಹಚ್ಚಗೆ ಹಸಿರು ವರ್ಣದ | ವಾರುಣದಿ ಉಪ್ಪಿನಕಾಯಿ ಕೂಟಾ || ನೀರು ಮಜ್ಜಿಗೆ ನಿಂಬೆÀಹಣ್ಣನೆ ಹಿಂಡಿ | ಭಾರತೀದೇವಿ ಎಡೆಮಾಡಿದಳೊ ತಂದು 6 ಉಂಡ ತರುವಾಯದಲಿ ಹರಿಯೇ ಪೀಠದಿ ಕುಳಿತು | ಕೊಂಡು ಬಂದ ಗಂಧ ತಾಂಬೂಲವ || ಸಿರಿ ವಿಜಯವಿಠ್ಠಲ | ಕೊಂಡನಾದ ಪುರಂದರಗೆ ಒಲಿದು ಒಲಿದು 7
--------------
ವಿಜಯದಾಸ