ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ ಬಾಲೆಯರಬಗೆ ಬಗೆ ಸೋಲಿಸಿಬರುವಂಥ ಮೇಲು ಮೇಲಾದ ಕೋಲಪ. ಸಾಗರನ ತನುಜಳು ಬಳುಕುತಬಾಗುತ ನಾಗವೇಣಿ ರುಕ್ಮಿಣಿಆಗ ಗೋವಿಂದಗೆ ಬೇಗನೆ ವಂದಿಸಿ ಹೋಗಬೇಕು ಮುಯ್ಯಕ್ಕೆ1 ಬಡನಡು ಬಳುಕುತ ಮಡದಿ ಮೋಹದ ರಾಣಿಖಂಡಿ ಮುದ್ದು ಸುರಿಯುತಲೆ ನಡೆದು ಬಂದು ಕೃಷ್ಣನಡಿಗೆರಗಿಭಾಮೆ ನುಡಿದಳು2 ಪೊಡವಿ ಪಾಲಿಪವಪ್ಪನೀ ನಡೆಮುಯ್ಯಕ್ಕೆನುತಲಿ ನುಡಿದಳು ಸತ್ಯಭಾಮೆ ಉಡಬೇಕು ವಸ್ತ್ರಂಗಳಇಡಬೇಕು ಭೂಷಣನಡೆ ಬೇಗ ಕೃಷ್ಣರಾಯ 3 ಮಾಧವ ಸಿಂಧೂಶಯನ ನೀನು ಬಂದರೆಮುಯ್ಯಕ್ಕೆ ಛsÀಂದ ತೋರುವುದೆಂದರು 4 ನೀಲ ಮೊದಲಾದ ಬಾಲೆಯರು ರಂಗಗೆ ಮೇಲೆ ಮೇಲೆ ವಂದಿಸಿ ಶ್ರೀಲೋಲ ರಾಮೇಶÀ ನೀಆಲಸ್ಯ ಮಾಡದೆ ಪಾಲಿಸಬೇಕೆಂದರು5
--------------
ಗಲಗಲಿಅವ್ವನವರು
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು