ಜಯ ಜಯ ಸ್ವರಸತಿ ಜಯವರ ಪೂರಣಮತಿ
ತ್ರಯಲೋಕ್ಯದಲಿ ಖ್ಯಾತಿ ಜಯ ಸುಕೀರ್ತಿ ಧ್ರುವ
ವಿದ್ಯಾವರದಾಯಿನಿ ಸಿದ್ಧಿಗೆ ಶಿಖಾಮಣಿ
ಬುದ್ಧಿ ಪ್ರಕಾಶಿನಿ ಸದ್ಭೂಷಿಣಿ 1
ಕರಕಮಲದಲಿ ವೀಣೆ ಸುರಸ ಅಮೃತವಾಣಿ
ವರವಿದ್ಯದಲಿ ದಾನಿ ಸುಪ್ರವೀಣೆ 2
ಪ್ರಸನ್ನವದನಿ ವಿಶ್ವದಲಿ ನೀ ಪೂರ್ಣೆ
ಹಂಸವಾಹಿನಿ ಪೂರ್ಣಿ ಸ್ವಸಿದ್ಧಿಣಿ 3
ಸದಾ ಸದ್ಗುರುಸ್ತುತಿ ಒದುಗುವ್ಹಾಂಗ ಸ್ಫೂರ್ತಿ
ಇದೇ ಮಹಿಪತಿ ಕುರ್ತಿ ಬೋಧಿಸುವ ಮತಿ4