ಇದೇ ಸಾಧಿಸಿನೋಡಿ ಮನ ಉನ್ಮನÀಮಾಡಿ ಘನಸುಖ
ಭೇಧಿಸಿದರ ಭಾಸುತದೆ ತನ್ನೊಳು ತಾನೆ ಕೌತುಕಧ್ರುವ
ನೋಡಿ ನೋಡಿ ಖೂನ
ಅರುಹು ಇಲ್ಲದೆ ಜನದೊಳು ಬರುದೆ ಹೇಳ್ಯಾಡುದೇನ
ನಿರ್ವಿಕಲ್ಪನ ನಿಜನೆಲೆನಿಭವರಿತು ನೋಡಿ ಸ್ಥಾನ
ಸರ್ವಸಾಕ್ಷಿ ಸರ್ವಾತೀತವೆಂಬ ವಸ್ತು ನೋಡಿ ಪೂರ್ಣ 1
ಕಣ್ಣಿನ ಕೊನೆ ಮುಟ್ಟಿ ಕರಗಿ ಮನವು ನೋಡಿ ಪೂರ್ಣ ಬೊಧ
ಸಣ್ಣ ದೊಡ್ಡವರೊಳಗಿದೆ ಒಂದು ಸಾರುತಿದೆ ವೇದ
ಧನ್ಯ ಧನ್ಯಗೈಸುವ ನಿಜ ಪುಣ್ಯ ಗುರುಪಾದ
ಚನ್ನಾಗ್ಯನುಭವದಿಂದ ನೋಡಲಿಕ್ಯಾಗದು ಸ್ವಾದ 2
ಸುರಿಮಳಿಗರೆವುತಲ್ಯದೆ ಸ್ವಸುಖದಾನಂದೊ ಬ್ರಹ್ಮ
ತೆರೆತಿಳಿಯಲಿಕ್ಕೆ ಗುರು ಶರಣ ಹೋಗಬೇಕು ಇದೇ ವರ್ಮ
ಹರುಷಗೈಸಿದ ನೋಡಿ ಪತಿತಪಾವನ ಸದ್ಗುರು ನಮ್ಮ
ತರಳ ಮಹಿಪತಿಗಿದೆ ನಿತ್ಯಭಿನವದ ನೋಡಿ ಸಂಭ್ರಮ 3