ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಜ್ಜನರ ಸಂಗ ಸ್ವಹಿತಕೆ ಸುಖಸನ್ಮತ ಅಮೃತ ಧ್ರುವ ಗಂಗಿಯೊಳು ಮುಳಗಿ ತಾ ಮಿಂದರ್ಹೋಗದು ಪಾಪ ಹಾಂಗೆಂದಿಗಲ್ಲ ಸಜ್ಜನರ ಪ್ರತಾಪ ಕಂಗಳಲಿ ಕಂಡರ್ಹೋಗುವುದು ತಾಪಾಪ ಸಂಗ ಸುಖದಲಿ ಸರ್ವಪುಣ್ಯ ಮೋಪ 1 ಚಂದ್ರ ಶೀತಳದೊಳು ನಿಂದರ್ಹೋಗುದು ತಾಪ ಎಂದೆಂದಿಗ್ಹಾಂಗಲ್ಲ ಸಜ್ಜನ ಸಮೀಪ ಒಂದೆ ಮನದಲಿ ನೆನೆದರ್ಹಿಂಗಿ ಹೋಗುದು ತಾಪ ವಂದಿಸೀದವಾ ಮೂರು ಲೋಕ ತಾಪಾ 2 ಕಲ್ಪತರುವಿಗೆ ಕಲ್ಪಿಸಿದರ್ಹೋಗುದು ದೈನ್ಯ ಒಲಮಿಂದ್ಹಾಗಲ್ಲ ಸದ್ಗುರು ಸುಪುಣ್ಯ ಕಲ್ಪಿಸದೆ ಕುಡುವದಿದು ನೋಡಿ ಘನ ತಾರ್ಕಣ್ಯ ಸಲಹುತೀಹ್ಯ ಮಹಿಪತಿಗಿದೆವೆ ಧನ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ಸಂಗವು ಲೇಸು ಸ್ವಹಿತಕೆ ಧ್ರುವ ನೆರಿಲವರನುದಿನ ಬಾಳುದು ಲೇಸು ಸರಸ ಸುಮಾತನೆ ಕೇಳುದು ಲೇಸು 1 ನೋಡಿದವರಾಚರಣೆಯ ಲೇಸು ಮಾಡಿದವರನು ಸರಣಿಯ ಲೇಸು 2 ಮಹಿಪತಿಗಿದೆ ಸುಖದೋರಿತು ಲೇಸು ವಿಹಿತಕ ವಿಹಿತಾಯಿತು ಬಲುಲೇಸು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು