ಅಪ್ಪಾ ಕೇಳೊ ನಿನ್ನ ಗುರುತ ನೀನೆ ತಪ್ಪಿದೆಪ್ಪ | ತುಪ್ಪ ಹಾಲು ಬಿಟ್ಟು ನೀ ಅಡವಿಯ ಸೊಪ್ಪು ಮೆಲಬ್ಯಾಡಪ್ಪ ಪ
ಅನುದಿನ ನೆನೆದು ಮಾಡುವ ಕರ್ಮವು ನಿನಗಿಲ್ಲಪ್ಪ | ಚಿನುಮಯಾತ್ಮಕ ಬ್ರಹ್ಮನು ನೀನು ಅನುಮಾನ ಇದಕಿಲ್ಲಪ್ಪ 1
ನಿತ್ಯ ಬೋಧಾಮೃತವ ಕುಡಿಯಪ್ಪ | ನಾದ ಬಿಂದು ಕಲಾತೀತರು ಹಾಡುವ ಪದವ್ಯಾಕಪ್ಪ | ಸಾಧು ಪುರುಷರು ಹೋದ ಹಾದಿಯ ಹಿಡಿದು ಮುಕ್ತಿ ಪಡೆಯಪ್ಪ 2
ಇಂದು ನಾಳೆ ಎಂಬುವದೊಂದು ಸಂಶಯ ನಿನಗೆ ಬ್ಯಾಡಪ್ಪ | ಕುಂದು ಕೊರತೆಯು ಇಲ್ಲಾತನಿಗೆ ಆನಂದವೆ ಸ್ವಾದವಪ್ಪ | ಬಂದು ಹೋಗಿ ನೀ ಭವಸಾಗರದೊಳು ಬಹು ಪರಿಯಿಂದಲಿ ನೊಂದೆಪ್ಪ | ತಂದೆಯಾದ ಭವತಾರಕನ ಹೊಂದಿ ದಿನವ ಕಳೆಯಪ್ಪ 3