ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ಎನ್ನ ತಾರಿಸುವಿಯೋ ತಿಳಿಯದಿಂದಿಗೆ ಕಂತುಪಿತನೆ ಮುಕುತಿ ಮಾರ್ಗ ಹೊಂದುವೆನೆಂದಿಗೆ ಪ ಓದಿತತ್ವ ಶಾಸû್ರಗಳನು ಜನರಿಗ್ಹೇಳುವೆ ನಾನು ಮೇದನಿಯೊಳು ಬಲ್ಲವನೆಂಬ ಗರ್ವ ತಾಳುವೆ ಸಾಧು ಸಂತರ ನಡಿಯ ನುಡಿಯ ಮಹಿಮೆ ಕೇಳುವೆ ಮತ್ತೆ ಹಾದಿತಪ್ಪಿ ಕುಜನ ವೃತ್ತಿಯಲ್ಲಿ ಬಾಳುವೆ 1 ಸ್ವಾದ ಲಂಪಟ ದುರ್ವಿಷಯ ಬಿಡದ ಸಕ್ತನು ಕಪಟ ಕಲುಷ ಚಿತ್ತನು ಸಾಧಕಗುರು ಹಿರಿಯರ ಅನುಸರಿಸಿದ ಭಕ್ತರು ಸಾಧಿಪಕರ್ಮ ವೃತ್ತಗಳಲ್ಲಿ ಡಂಭಯುಕ್ತನು 2 ಒಂದು ಎರಡು ಹೇಳಲೇ ಎನ್ನತಪ್ಪವಾ ಹೃದಯ ಮಂದಿರ ಮೊಳಗಿಲ್ಲವಾಯಿತು ಜ್ಞಾನ ದೀಪವಾ ನೊಂದು ಬೆಂದು ತಾಪತ್ರಯದಿ ಸುಖದ ರೂಪವಾ ಬಗೆವೆ ನಿಂದು ಒಮ್ಮಿಗ್ಯಾರ ವಿಡಿಯೆ ಪಶ್ಚಾತ್ತಾಪವಾ 3 ಪತಿತಪಾವನ ದೀನೋದ್ಧರಣನೆಂಬ ಬಿರುದವಾ ಕ್ಷಿತಿಯೊಳಿನ್ನು ತಾಳಿದುದರ ಕೇಳು ಮಾಧವಾ ಮತಿವಿವೇಕದಿಂದೆ ಹಚ್ಚಿ ಭಕುತಿ ಸ್ವಾದವಾ ಗತಿಯ ಕೊಟ್ಟ ಕರಿಯೆ ನಾನು ನಿನ್ನ ಮರೆದವಾ 4 ನಿನ್ನ ಭಕ್ತರ ಮನಿಯ ನಾಯಿ ಯಂದು ಎನ್ನನು ಮುನ್ನಿನವರು ಉಂಡ ವೆಂಜಲ ಶೇಷವನ್ನನು ಇನ್ನು ಇಕ್ಕಿಸಿ ಸಲಹಬೇಕು ಮೂಢ ಚಿನ್ನನು ಘನ್ನ ಗುರು ಮಹಿಪತಿಸ್ವಾಮಿದಯ ಸಂಪನ್ನನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವೈದ್ಯ ಬಂದ ನೋಡಿ - ವೆಂಕಟನೆಂಬ |ವೈದ್ಯ ಬಂದ ನೋಡಿ ಪ.ವೈದ್ಯ ಬಂದನು ವೇದವೇದ್ಯ ನೋಡೀಗಲೇಶ್ರೀದೇವಿರಮಣನು ಶ್ರೀನಿವಾಸನೆಂಬ ಅಪಎಷ್ಟು ದಿನದ ರೋಗಗಳೆಂಬುದ ಬಲ್ಲ |ಗಟ್ಟಿಯಾಗಿ ಧಾತುರಸಗಳನು ಬಲ್ಲ ||ಕಷ್ಟ ಬಡಿಸದಲೆನ್ನ ಭವರೋಗ ಬಿಡಿಸುವ |ಶಿಷ್ಟವಾದ ದೇಹ ಕೊಟ್ಟು ಕಾಯುವನಿವ 1ಹೊನ್ನು - ಹಣಂಗಳ ಅನ್ನವ ಅನುಸರಿಸಿ |ತನ್ನ ದಾಸನೆಂಬ ನಿಜವ ನೋಡಿ ||ಚೆನ್ನಾಗಿ ಜಿಹ್ವೆಗೆ ಸ್ವಾದವಾಗಿರುವಂಥ |ತನ್ನ ನಾಮಾಮೃತ ದಿವ್ಯ ಔಷಧವೀವ 2ಈತ ದಿಟ್ಟಿಸಿ ನೋಡೆ ಎಳ್ಳಷ್ಟು ರೋಗವಿಲ್ಲ |ಈ ತನುವಿಗೆಂದೆಂದು ರೋಗಬರಲರಿಯದು ||ಈತ ಅನಂತರೂಪದಿ ಜೀವರಿಗೆ ಮುನ್ನ |ಪ್ರೀತಿಯಿಂದಲಿ ಭವರೋಗ ಬಿಡಿಸುವ 3ಧರ್ಮವೈದ್ಯನಿವ ಜಗಕ್ಕೆಲ್ಲ ಒಬ್ಬನೆ |ಮರ್ಮಬಲ್ಲ ರೋಗಜೀವಂಗಳ ||ನಿರ್ಮಲವಾಗಿಹ ತನ್ನ ನಾಮಸ್ಮರಣೆ |ಒಮ್ಮೆ ಮಾಡಲು ಭವರೋಗ ಬಿಡಿಸುವ 4ಅನ್ಯ ವೈದ್ಯನೇಕೆ ಅನ್ಯ ಔಷಧವೇಕೆ ? |ಅನ್ನ ಮಂತ್ರ - ತಂತ್ರ - ಜಪವೇತಕೆ ? ||ಚೆನ್ನ ಪುರಂದರವಿಠಲನ್ನ ನೆನೆದರೆ |ಮನ್ನಿಸಿ ಸಲಹುವ ವೈದ್ಯ ಶಿರೋಮಣಿ 5
--------------
ಪುರಂದರದಾಸರು