ರಾಮನ ನೋಡಿರೈ ನಿಮ್ಮಯ ಕಾಮಿತ ಬೇಡಿರೈ ಪ
ತಾಮರಸಸಖ ಸುವಾಂಶಾಬ್ಧಿಶರ
ತ್ಸೋಮಾ ಕಮಲಧೀಮ ಅ.ಪ.
ಅಜ ಜ್ಯೋತಿರ್ಮಯ ಜಾಬಾಲಿ ಮುನಿಯ
ತಪವರಿದಾ ಕಾಮಿತ ನೆರೆದಾ
ಭೂತಾಧಿಪನ ಭವನದೊಳರ್ಚನೆಗೊಂಡಾ ದೃತಕೋದಂಡಾ
ಮಾತಂಗಾರಿ ವರೂಥಿಯ ಜನಕ
ಮೇದಾಗಾರಕೆ ಪೋದಾ 1
ಸೌಭರಿ ಮುನಿಪಗೆ ಸೌಖ್ಯವ ಕರುಣಿಸಿ ಕೊಟ್ಟ ಜಗಕತಿಧಿಟ್ಟ
ನಾಭಿಜನ್ಮನಿಹ ನಗವರ ಸ್ಥಾನಕೆ ಬಂದ ಶುಭಗುಣ ವೃಂದಾ
ವೈಭವದಿಂದಲಯೋಧ್ಯಾ ನಗರದಿ ಮೆರೆದಾ ಕಾಮಿತವೆÀರೆದಾ
ಸ್ವಾಭಿಮಾನದಲಿ ಸತಿಯಳಿಗಿತ್ತನು ವರವಾ ದೇವರ ದೇವಾ 2
ಜಾಂಬವಂತನಿಗೆ ಜಾನಕಿರಮಣನು ಇತ್ತ ತನ್ನಯಧ್ಯಾತ
ಸಂಭ್ರಮದಲಿ ವೇದಗರ್ಭನೊಡನಾಡ್ದಾ ಮುಕ್ತಿಯ ನೀಡ್ದಾ
ಕುಂಭೀಶ್ವರನ ಸುಕೋಶದಿ ಬಹುದಿನ ವಾಸ ವೆಸಗಿದನೀಶಾ
ಒಲಿದಾ ಮೋದದಿ ನಲಿದ 3
ಅಲವಬೋಧಮುನಿ ಅತಿಮೋದದಲರ್ಚಿಸಿದ ಸಲೆ ಮೆಚ್ಚಿಸಿದ
ಇಳೆಯೊಳು ಬಹು ಯತಿಕರ ಪೂಜಿತನಾದ ಲೀಲ ವಿನೊದಾ
ಕಳೆದ ಮನದೊಳು ಪೊಳೆದ
ಪ್ರೀಯ ಕವಿಜನಗೇಯ 4
ವಾರಿಧಿಬಂಧನ ವಾನರ ನಾಯಕರಾಳ ದೈತ್ಯರ ಸೀಳ್ದಾ
ಪದಾಂಬುಜನೀತಾ ತ್ರಿಗುಣಾತೀತ
ಆರಾಧಿಪರಿಗೆ ಅಖಿಳಾರ್ಥಗಳನು ಕೊಡುವಾ ದುರಿತವ ತಡೆವ
ನೀರಜಾಕ್ಷ ಜಗನ್ನಾಥ ವಿಠ್ಠಲ ನಿಶ್ಚಿಂತಾ ಸೀತಾಕಾಂತ 5