ಜಗದ ಜೀವರನುದರದಲಿಟ್ಟು ಕರುಣಾಮೃತದಿ |
ಬಗೆಬಗೆಲಿ ಸಲಹುಲೇಹ ತಾಯಿ ನೀನೇ |
ಮಗುಳೆ ಮೂಲ ಪ್ರಕೃತಿಯಲಿ ಬೀಜವಿಟ್ಟು ಮೂ |
ಜಗವ ಪುಟ್ಟಸುತಿಹ ತಂದೆ ನೀನೇ |
ಮಿಗಿಲಾಗಿ ಬಂದ ದುರಿತಂಗಳ ನಿವಾರಿಸುವ |
ಭಾಗವತರಿಗೆ ಅನಿಮಿತ್ತ ಬಂಧು ನೀನೇ 1
ಸುಗಮದಧಿ ದೈವತಾ ರೂಪದಲ್ಲಿ ಕರಣೇಂದ್ರಿ-
ನಿಗಮಾಗ ಮಗಳಿಂದ ಸ್ತುತಿಸುತ ಸುಜ್ಞಾನ |
ದುಗಮದಿರುವ ಗುರುರೂಪ ನೀನೇ |
ಭಕುತಿಯಲಿ ವಿಧಿಮರುತ ಶಿವಗರುಡ ಫಣಿಪೇಂದ್ರಾ |
ದಿಗಳು ಪೂಜಿಪ ಕುಲದೈವ ನೀನೇ 2
ಹಲವು ಜನುಮದಿ ಸಂಗಡಿಗನಾಗಿ ಸಮತೆಯಲಿ |
ಸಲಿಸಿ ಬಯಕೆಯ ಕಾವ ಗೆಳೆಯ ನೀನೇ |
ಒಲಿದನ್ನ ವಸ್ತ್ರ ಸಂಪದ ಸಕಲವರ ಪುಣ್ಯ |
ಫಲದಂತೆ ನೀಡುತಿಹ ಸ್ವಾಮಿನೀನೇ |
ಜಲಜಾಕ್ಷ ಅದುಕಾರಣ ಎನಗೆ ಸಕಲವು ನೀನೇ |
ಸಲಹು ಭಕುತಿಯನಿತ್ತು ಗುರು ಮಹಿಪತಿ ಪ್ರಭು3