ಎನ್ನನುದ್ಧರಿಸಲಾಗದೆ ಚೆನ್ನರಾಯ ಪ.
ಎನ್ನನುದ್ಧರಿಸಲಾಗದೆ ಚೆನ್ನರಾಯ ಬಿನ್ನೈಸುವೆಇನ್ನು ಬೇರೆ ಗತಿಯ ಕಾಣೆ ನಿನ್ನ ಚರಣಕಮಲದಾಣೆ ಅ.ಪ.
ನಿಗಮ ಉಸುರುತಿರಲು ನಿನ್ನಚರಣವನ್ನು ಶಿರದೊಳಾಂತೆ ಎನ್ನ ಮೇಲಣಕರುಣವಿಲ್ಲದದೇನುಕಾರಣ ಸಲಹಬೇಕುಸುರರ ಮಸ್ತಕದ ಸುಭೂಷಣ 1
ಹಿಂದೆ ನಾನನಾಥನಾಗಿ ಒಂದೆರಡ[ಲ್ಲಾ]ನೇಕ ಜನ್ಮದಿಬಂದು ನರಕಯಾತನೆಯಲ್ಲಿ ನೊಂದು ಬೆಂದು ಬಾಯಬಿಡುತಬಂದೆ ನಿನ್ನ ಪೆಸರುಗೊಂಡೆನೊ ಸನಾಥನಾಗಿಮುಂದೆ ನಾಮಸುಧೆಯನುಂಡೆನೊ ನೀ ಕೃಪಾಳುಎಂದು ನುಡಿವರನ್ನು ಕಂಡೆನೊ 2
ಹಲವು ಮಾತನಾಡಲೇನು ಒಲಿವುದಿನ್ನು ಹರಿಯೆ ನಿನ್ನಸಲಿಗೆಯೊಳೀ ಬಿನ್ನಪವನು ಸಲಿಸುತಿಹೆನು ಮುಂದಕಿನ್ನುಜಲುಮ ಬಾರದಂತೆ ವರವನು ಇತ್ತು ಎನ್ನಸಲಹೊ ದೊರೆಯೆ ನಿನ್ನ ಕರೆಯೆನೊ ಮುಂದೆ ಮುಕುತಿ-ಲಲನೆಯೊಡನೆ ಸುಖದಲಿರುವೆನು 3
ದೇಶವರಿಯೆ ನಾನು ನಿನ್ನ ದಾಸನೆಂದು ಡಂಗುರವನು ಹೊ-ಯಿಸಿ ತಿರುಗುತಿರÀಲು ಮೋಹಪಾಶವೆನ್ನ ಸುತ್ತಿಕೊಂಡುಘಾಸಿ ಮಾಡುತಿರಲು ಬಿಡಿಸದೆ ಇರುವ ಪಂಥವಾಸಿಯೇನು ಇನ್ನು ಅಲೆಸದೆ ಸಲಹೊ ಸ-ರ್ವೇಶ ನಂಬಿದವನ ಕೆಡಿಸದೆ 4
ಎನ್ನ ದುರ್ಗುಣವನ್ನು ಮರೆದು ನಿನ್ನ ಸದ್ಗುಣದಿ ಪೊರೆದುಮನ್ನಿಸಿದರೆ ಲೋಕದೊಳಗೆ ಧನ್ಯನಹೆನು ಜನಮವೆತ್ತಿಉನ್ನತಾಹುದು ನಿನ್ನ ಕೀರುತಿ ನಾಶವಾಹುದುಎನ್ನ ಭವದ ಬಹಳ ಧಾವತಿ ಸಲಹೊಚೆನ್ನ ಹಯವದನಮೂರುತಿ 5