ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಜ್ಞಾನಿ ಜೀವನಿಗೆ ಅಭಿಮಾನ ಬಹಳ ಸುಜ್ಞಾನಿಯಾ ನುಡಿಯ ಲಕ್ಷಿಸನು ಕೇಳಾ ಪ ಬುದ್ಧಿ ಮನದೇಹಗಳು ತಾನೆಂದು ತಿಳಿಯುತಲಿ ಇದ್ದುದನು ಮರೆತು ತಾ ಜಾಣನೆನಿಸುವನು ಒದ್ದಾಡುತಿದ್ದರೂ ಅಭಿಮಾನವನೆ ಹÉೂತ್ತು ಗುದ್ದಾಡುತಲಿ ತಾನು ಸುಖವ ಹುಡುಕುವನು 1 ಸಟಿಯಾದ ಸಂಸಾರ ದಿಟವೆಂದು ನಂಬುತಲಿ ಸೆಟೆದಾಡುತಿರುವೆಯೋ ತಿಳಿದು ನೋಡಾ ಹಟವ ಹಿಡಿಯಲು ಬೇಡ ತೋರ್ಪುದೇ ದಿಟವೆಂದು ನಟನೆಯಾ ಮಾತಲ್ಲವೆನೆ ಕೇಳನವನು 2 ಅರಿ ನೀನು ನಿನ್ನ ಅರಿವಿನಾ ಹೊರತು ನೀ ಸುಖ ಪೊಂದಲಾರೆ ಆರು ಸುಖಪಡೆದಿಲ್ಲ ಅಜ್ಞಾನದಿಂದೆನಲು ಇರಲಿ ಹೋಗೆಂದೆನುತ ಮೋರೆ ಹೊರಳಿಸುವಾ 3 ಬಾಳುವೆಯು ನಿಜವೆಂದು ನಂಬಲಿವನಾ ಗೋಳು ಗಾಳಿಯನೆ ಗುದ್ದಿ ಮೈ ನೊಯ್ಸಿಕೊಂಡಂತೆ ಕೇಳು ಚಿತ್ರದೊಳಿರುವ ಬೆಂಕಿ ತಾ ದಿಟವೆಂದು ಮೇಲೆ ನೀರೆರೆದಂತೆ ಎನೆ ಕೇಳನವನು 4 ಗೊಡ್ಡು ಮಾತೆಂದು ತಾ ಜ್ಞಾನಕೆರವಾಗುತಲಿ ದಡ್ಡತನವನೆ ತೋರಿ ದುಃಖಿಯಾಗುವನು ಶುದ್ಧಜ್ಞಾನವನಂಬಿ ತನ್ನ ತಾ ತಿಳಿಯದಲೆಬುದ್ಧ ಶಂಕರನುಕ್ತಿಗೆರವಾಗುತಿಹನು 5
--------------
ಶಂಕರಭಟ್ಟ ಅಗ್ನಿಹೋತ್ರಿ