(ಕಾರ್ಕಳದ ವೆಂಕಟೇಶನನ್ನು ನೆನೆದು)
ಶ್ರೀನಿವಾಸ ನಮೋ ನಮೋ ಶ್ರುತಿಗಾನಲೋಲ ಪಾಹಿ ಪ.
ವಿಪಿನ ನ-
ವೀನದವಾನಲ ದೀನೋದ್ಧಾರ ದಯಾನಿಧೆ ಸುಂದರ ಅ.ಪ.
ಶೇಷಗಿರಿಯಿಂದ ಸುಜನಗಳ ಘೋಷದಿ ನಂಬಿದ
ದಾಸಜನರಭಿಲಾಷೆಯನು ಸಂತೋಷದಿ ಕೊಡಲು-
ಲ್ಲಾಸದಿಂದ ಪರೇಶ ನಾನಾ ವಿಲಾಸದಿ ನೆಲಸುತ
ಕಾಸುವೀಸದ ಭಾಷೆಯನು ದಿಗ್ದೇಶದಿಂದ ಮಹಾಸುಕೀರ್ತಿಯ
ರಾಸಿಗಳಿಸಿ ಜಗದೀಶ ಪರೇಶ ಮ-
ಹೇಶವಿನುತ ನಿರ್ದೋಷ ಜಗನ್ಮಯ 1
ಉತ್ತಮಾಂಗಸುರತ್ನಖಚಿತಕಿರೀಟದ ನಿಜಪದ-
ಭಕ್ತಜನಮನವೃತ್ತಿ ಒಲಿಸುವ ಕೂಟದ ಕರುಣೋ-
ತ್ಪತ್ತಿ ಸರಸಿಜನೇತ್ರಯುಗ್ಮದ ನೋಟದ ಭೂಷಣ-
ಮೊತ್ತದಿಂದಾದಿತ್ಯಕೋಟಿಯನ್ನೆತ್ತಿಂದತೆಸೆವುತ್ತ ಮಂಗಲ-
ಮೂರ್ತಿಧರಿಸಿ ಜನರರ್ತಿಯ ಸಲಿಸುವ
ಚಿತ್ತಜಜನಕ ಸರ್ವೋತ್ತಮ ನಿರುಪಮ 2
ಪಂಕಜಾಂಬಕ ಶಂಕರಾಪ್ತ ಶುಭಾಕರ ಶ್ರೀವ-
ತ್ಸಾಂಕ ಮುಕ್ತಾಲಂಕೃತ ಕರುಣಾಕರ ಭಕ್ತಾ-
ತಂಕರಹಿತ ನಿಶ್ಯಂಕ ನಿತ್ಯನಿರಾಕರ ಪ್ರಭು
ವೆಂಕಟೇಶ ನಿರಾಮಯಾಮರಸಂಕುಲಾರ್ಚಿತ ಶಂಖಚಕ್ರಗ-
ದಾಂಕಿತ ದನುಜಭಯಂಕರ ವರ ನಿರ-
ಹಂಕರ ನಿಜದ ನಿಷ್ಕಳಂಕಚರಿತ್ರ 3
ಮಂದರಾಧರ ಮಾಪತೇ ಮುಖಚಂದಿರ ಮೌನಿ
ವೃಂದವಂದ್ಯ ಸುರೇಂದ್ರಪೂಜ್ಯ ಧುರಂಧರ ಮಹಾ-
ಕಂಬುಕಂಧರ ಶೋಭಿಪ
ಕುಂದರದನ ಕುಚೇಲಪಾಲಾರವಿಂದನಾಭ ಪುರಂದರಾರ್ಚಿತ
ಮಂದಹಾಸ ಮುಚುಕುಂದವರದ ಗೋ-
ವಿಂದ ಸಚ್ಚಿದಾನಂದ ಉಪೇಂದ್ರ 4
ಮೂರು ಲೋಕೋದ್ಧಾರಿ ಘನಗಂಭೀರನೆ ವೆಂಕಟ
ಧೀರಕಾರ್ಕಳಸಾರನಗರಾಧಿಕಾರನೆ ಭೂಸುರ-
ಭೂರಿವೇದಪುರಾಣಘೋಷಾದಿಹಾರನೆ ಸಂತತ
ಚಾರು ಗೌಡಸಾರಸ್ವತಶೃಂಗಾರಋಗ್ವೇದಾಖ್ಯ ಉತ್ತಮ
ದಾರುಣೀಸುರರಿಂದನವರತ ಮಂಗ-
ಲಾರತಿಗೊಂಬ ಲಕ್ಷ್ಮೀನಾರಾಯಣ ಹರಿ 5