ಎಲೆ ಜೀವನ್ಮುಕ್ತ ನೀನೆ ಬ್ರಹ್ಮವೆಂದು ಕಾಣೋಎಲೆ ಜೀವನ್ಮುಕ್ತ ನೀನೆ ಬ್ರಹ್ಮವೆಂದು ಕಾಣೋ ಪ
ಭಾನುವ ನೋಡಲು ಒಳಕಂಡಿಯ ಹಂಗ್ಯಾಕೆನೀನು ನಿನ್ನರಿವುದಕೆ ಯೋಗಗಳ ಸಾಧನ ಬೇಕೆ 1
ನಳಿನ ಸಖನ ನೋಡುವುದಕೆ ಬೆಳಕನು ಕೋರಲುಬೇಕೆಬಲು ನಿನ್ನನು ಕಾಣುವುದಕೆ ಸಾಧಕರ ಸಾಧನ ಬೇಕೆ 2
ಯೋಗಗಳೆಂಬುವುದಿನ್ನು ಜೀವ ಭ್ರಾಂತಿಯೆನ್ನುಈಗಲು ಇತರರಿಲ್ಲೆನ್ನು ಚಿದಾನಂದ ಸದ್ಗುರು ತಾನೆ ಎನ್ನು 3