ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುಮ್ಮನೆಲ್ಲಿಹ ತೋರಮ್ಮ-ನಮ್ಮಮ್ಮ-|ಸುಮ್ಮನಂಜಿಸಬೇಡಮ್ಮ ಪಪಂಚಾಶತ್ಕೋಟಿ ವಿಸ್ತೀರ್ಣದ ಭೂಮಿಯ |ವಂಚನೆಯಿಲ್ಲದೆ ತಿರುಗಿ ಬಂದೆನೆ ನಾನು ||ಹಂಚಿಸಿಕೊಟ್ಟೆನೆ ಅವರವರಿಗೆ ನಾ |ಅಂತು ನೋಡಿದರೂ ಕಾಣೆನೆ ಗುಮ್ಮನ 1ಈರೇಳು ಲೋಕವನುದರದೊಳಗೆ ಇಟ್ಟು |ತೋರಿದೆ ಬ್ರಹ್ಮಾಂಡ ಬಾಯೊಳಗೆ ||ಘೋರರೂಪದಿ ಬಂದ ಗಾಳಿಯ ಸುರನ ಕೊಂದೆ |ಅಲ್ಲಿ ನೋಡಿದರೂ ಕಾಣೆನೆ ಗುಮ್ಮನ 2ಕಾಳಿಯ ಮಡು ಧುಮುಕಿ ಕಾಳಿಂಗನ ಹೆಡೆ ತುಳಿದು |ಮೇಲೆ ನಾಟ್ಯಂಗಳ ನಾನಾಡುತಲಿದ್ದೆ ||ಓಲೆಯ ಭಾಗ್ಯವನಿತ್ತೆ ನಾಗಪತ್ನಿಯರಿಗೆ |ಅಲ್ಲಿ ನೋಡಿದರೂ ಕಾಣೆನೆ ಗುಮ್ಮನ 3ಅಕ್ರೂರನಿಗೆ ವಿಶ್ವರೂಪವ ತೋರಿದೆ |ಘಕ್ಕನೆ ರಥವೇರಿ ಮಥುರೆಗೆ ಪೋದೆ ||ಸೊಕ್ಕಿದ ರಜಕನ ಕೊಂದು ಮಡಿಯನುಟ್ಟೆ |ಹೊಕ್ಕು ನೋಡಿದರೂ ಕಾಣೆನೆ ಗುಮ್ಮನ 4ಬಿಲ್ಲು ಹಬ್ಬಕೆ ಹೋಗಿ ಮಲ್ಲರ ಮಡುಹಿದೆ |ಅಲ್ಲಿ ಮಾವನ ಕೊಂದು ಮುತ್ತಯ್ಯಗೊಲಿದೆ ||ಚೆಲ್ವಗೋಪಾಲ ಶ್ರೀ ಪುರಂದರವಿಠಲನ |ಸೊಲ್ಲು-ಸೊಲ್ಲಿಗೆ ನೀ ಬೆದರಿಸಬೇಡಮ್ಮ 5
--------------
ಪುರಂದರದಾಸರು