ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ
ಯಶವ ಬಡಿಗೋಲವನು ಎತ್ತುವರೇ ರಂಗಾ ಪ
ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ|
ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ|
ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ|
ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1
ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ|
ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ|
ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ|
ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2
ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ|
ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ|
ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ|
ನ್ಯೂನಾರಿಸದೇ ನಿನ್ನವನೆಂದು ಸಲಹೋ 3