ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1 ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2 ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾಧಕರೊಳು ಸಿದ್ಧನು | ಹರಿಪಾದಕಮಲ ಕಾಣಬೇಕೆಂದು ಬಯಸುವವ ಪ ಭಕ್ತಿಯ ಹಡಗವ ಸಾರಿ ಭವಾಂಬುಧಿ | ಯುಕ್ತಿಲಿ ದಾಟಿ ಮನೋರಥದಾ | ಮುಕ್ತಿಯ ಪಟ್ಟಣದಲ್ಲಿಹ ನಿಜಘನಾ | ಸಕ್ತಿಲಿ ಪಡಕೊಂಡು ಸುಖದಲಿ ಕುಳಿತಾ 1 ಉಣಲಾಡುವಲ್ಲಿ ಸರ್ವ ಅನುಭವದಲಿ ಹರಿ | ನೆನೆಯದೆ ಅರ್ಪಣೆಯಾಗುವದು | ಜನದೊಳು ಅವರವರಂತೆ ಸೋಪಾಧಿಕ | ಯೋಗಿ 2 ಕ್ಷೀರ ನೀರ ಭೇದ ಮಾಡುವ ಹಂಸ ವಿ | ಚಾರದಿ ಸಾರಾಸಾರವ ತಿಳಿದು | ಪ್ರಾರಬ್ಧ ಗತಿಯಲಿ ಸ್ವಾನಂದದಿಂದಿಹ | ಧಾರುಣಿ ಜನರನು ತಾರಿಸುವಾ 3 ಪುಣ್ಯದ ಫಲದಾಶೆಯಾತಕ ಬಾಲಗ | ಹೊನ್ನ ತಾ ಗುಂಬೆಂಬ ತ್ಯರನಂದದಿ | ಪರಿ | ಚೆನ್ನಾಗಿ ತಿಳಿದಿಹ ನಿದ್ವಂದಿಯೋ 4 ಬಲ್ಲವಿಕೆಯ ದೋರಿ ಸೊಲ್ಲಿಗೆ ಬಾರದೆ | ಬೆಲ್ಲಸವಿದ ಮೂಕನಂದದಲಿ | ಪುಲ್ಲನಾಭನು ಇರುವೆಲ್ಲರೊಳಗೆ ನೋಡಿ | ನಿಲ್ಲವ ಗುರು ಮಹಿಪತಿ ಪ್ರಭು ಶರಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂದಿತಯ್ಯ ಪ್ರಾಯವು |ಸಂದಿತಯ್ಯ ಪ್ರಾಯವು ಪಮೂರು ತಿಂಗಳುಸಂದುಹೋಯಿತು ತಿಳಿಯದೆ ||ಬಂದೆ ತಾಯಿಯ ಜಠರದಲಿ ಮ-|ತ್ತೊಂದು ಬುದ್ಧಿಯನರಿಯದೆ ||ಬೆಂದೆ ನವಮಾಸದಲಿ ಗರ್ಭದಿ |ಒಂದು ದಿವಸವು ತಡೆಯದೆ ||ಕುಂದದೀಪರಿಯೊಂದು ವರುಷವು |ಇಂದಿರೇಶನೆ ಕೇಳು ದುಃಖವ 1ಕತ್ತಲೆಯೊಳಿರಲಾರೆನೆನುತಲಿ |ಹೊತ್ತೆ ಹರಕೆಯ ನಿನ್ನನು ||ಮತ್ತೆ ಜನಿಸಲು ಭೂಮಿಯೊಳು ನಾ |ಅತ್ತುನಿನ್ನನು ಮರೆತೆನು ||ಮತ್ತೆ ಮಲ-ಮೂತ್ರದೊಳು ಬಾಲ್ಯದಿ |ಹೊತ್ತು ದಿನಗಳ ಕಳೆದೆನು ||ಮತ್ತೆ ನರಕದೊಳುರುಳುತುರುಳುತ |ಉತ್ತಮೋತ್ತಮ ನಿನ್ನ ನೆನೆಯದೆ 2ಚಿಕ್ಕತನವನು ಮಕ್ಕಳಾಟದಿ |ಅಕ್ಕರಿಂದಲಿ ಕಳೆದೆನು ||ಸೊಕ್ಕಿ ಹದಿನಾರಲಿ ನಾನತಿ |ಮಿಕ್ಕಿ ನಡೆದೆನು ನಿನ್ನನು ||ಸಿಕ್ಕಿ ಬಹು ಸಂಸಾರ ಮಾಯೆಯ |ಕಕ್ಕುಲಿತೆಯೊಳು ಬಿದ್ದೆನು ||ಹೊಕ್ಕುದಿಲ್ಲವು ನಿನ್ನ ಪಾದವ |ರಕ್ಕಸಾರಿಯೆ ಕೇಳು ದುಃಖವ 3ಸುಳಿದೆ ಮನೆಮನೆ ಕಳೆದೆ ಕಾಲವ |ಉಳಿದ ಯೋಚನೆ ಮಾಡದೆ ||ಬೆಳೆದೆ ತಾಳೆಯ ಮರದ ತೆರದಲಿ ||ಉಳಿವ ಬಗೆಯನು ನೋಡದೆ ||ಎಳೆಯ ಮನದೊಳೆ ಇಳೆಯ ಜನರೊಳು |ಬಳಕೆ ಮಾತುಗಳಾಡಿದೆ ||ಕಳೆದೆ ಈ ಪರಿಯಿಂದ ಕಾಲವ |ನಳಿನನಾಭನೆ ನಿನ್ನ ನೆನೆಯದೆ 4ಎಡೆಬಿಡದೆಅನುದಿನದಿ ಪಾಪದ |ಕಡಲೊಳಗೆ ನಾನಾಳ್ದೆನು ||ದರವ ಕಾಣೆದೆ ಮಧ್ಯದಲಿ ಎ-|ನ್ನೊಡಲೊಳಗೆ ನಾನೊಂದನು ||ದೃಢದಿ ನಿನ್ನಯ ಧ್ಯಾನವೆಂಬಾ |ಹಡಗವೇರಿಸು ಎನ್ನನು ||ಒಡೆಯ ಪುರಂದರವಿಠಲ ಎನ್ನನು |ಬಿಡದೆ ಕಾಯೈ ಬೇಗ ಶ್ರೀಹರಿ5
--------------
ಪುರಂದರದಾಸರು