ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವಪರಿಯಲಿ ನಿನ್ನನು ವೊಲಿಸುವೆ ದೇವ ಎನ್ನೊಳಗೆ ಒಂದಾದರೂ ಗುಣವಿಲ್ಲಾ ಪ ಅರಿಯೆ ಧರ್ಮವ ಪಾಪ | ಮರಿಯೆ ಉತ್ತಮರನ್ನ ಕರಿಯೆ ನಾಮಕೆ ಬಾಯಿ | ತೆರಿಯೆ ಸುರಿಯೆ ಜರಿಯೆ ಮೋºಕೆ ಮನ | ಮುರಿಯೆ ವ್ಯಾಕುಲ ಜ್ಞಾನಾಂ | ಕುರಿಯ ನಿನ್ನವರೊಳು | ಬೆರಿಯೆನರಿಯೆ ಸರಿಯೆ ದುಸ್ಸಂಗ ಕಥಾ | ಬರಿಯೆ ಕರದಿ ಯಾತ್ರಿಗೆ ಹರಿಯೆ ಪುಣ್ಯ ತೀರ್ಥ | ವರಿಯೆ ಮೊರಿಯೆ ಹರಿಯೆ ಜಗದೊರೆಯೆ | ಸಿರಿದೊರೆಯೆ ಅಘ ಕರಿಗೆ ಕೇಸರಿಯೆ ಮತ್ತಾ | ರರಿಯೆ ನಿನ್ನವರ ಮರಿಯೆ1 ನಡಿಯೆ ಸುಮಾರ್ಗ ವ್ರತವಿಡಿಯೆ ಮುಡಿದ ಪೂವು ಮುಡಿಯೆ ಕಾಮದ ಮರ್ಮ | ತಡಿಯೆ ಕಡಿಯೇ ಕುಡಿಯೆ ಪಾಪೋದಕವ ನುಡಿಯೆ ಮಂಗಳ ವಾರ್ತಿ ಪಿಡಿಯೆ ಭಕುತಿ ನೀತಿ ಪಿಡಿಯೆ ಗುಡಿಯೇ ಸುಕೃತಿ ಕಾಳ | ಗೆಡಿಯೆ ಪರರೊಸ್ತಕ್ಕೆ ತೊಡಿಯೆ ಚಿಂತಾತುರವ | ವುಧಿಯೆ ಹೊಡಿಯೆ ಕೊಡಿಯೆ ಎನ್ನಗೊಡಿಯೆ ನೆಂ | ದೆಡೆಯಲ್ಲಿ ಸೂಸಿದಾ ಪುಡಿಯಲ್ಲಿ ವೊಡಬೆರಸೆ | ಅಡಿಗಡಿಗೆ ಎನ್ನ ಕಡಿಗೆ 2 ಸುಳಿಯೆ ಕೀರ್ತನಿಗೆ ಮದ | ವಳಿಯೆ ಗುರುನಿಂದಕರ ಹಳಿಯೆ ಕಾಮದ ಕುಪ್ಪೆ | ಕಳಿಯೆ ಬಳಿಯೆ ತೊಳಿಯೆ ಮನನ ನರಕಕ್ಕೆ | ಮುಳಿಯೆ ಸುಮತಿಮಾರ್ಗ ತಿಳಿಯೆ ಪದವಿಗೆ ಪೋಗಿ | ಇಳಿಯೆ ಬೆಳಿಯೆ ಛಳಿಯೆ ಮುಂದಿನ ಜನನ | ಹೊಳೆಯೆಂಬೋದು ಅರಿದು ಸಂಚಿತ ಕರ್ಮ | ವಳಿಯೆ ತುಳಿಯೆ ವುಳಿಯೆ ಬೊಬ್ಬುಳಿಯೆ ಈ | ಕಳೆಯೇನುವಲ್ಲನಭ ಸುಳಿ ಹೃದಯಾವಳಿಯಲ್ಲಿ | ವಿಜಯವಿಠ್ಠಲವೊಳಿಯೆ3
--------------
ವಿಜಯದಾಸ
ದುರಿತ ಬ್ರಹ್ಮಾಸ್ತ್ರಜಯಜಯ ಜಯತು ಪ್ರತಿಯಿಲ್ಲದಸ್ತ್ರಾ ಪ ಉಟ್ಟಿಹ ಕಾಶಿಯ ಉಡಿಗೆತೊಟ್ಟಿಹ ಎದೆ ಕಟ್ಟುಕಟ್ಟಿದ ಖಡ್ಗ ಕಠಾರಿರಕ್ತದ ತಿಲಕವಿಟ್ಟುಮುಷ್ಠಿಯಲಿ ಮುದ್ಗರ ಶೂಲಧನು ಶರವಳವಟ್ಟುಬಿಟ್ಟ ಕಂಗಳ ಕಿಡಿಯುಛಟಛಟ ಛಟವಿಟ್ಟು 1 ಏರಿಸಿ ಪಟ್ಟೆಯ ಹಲಗೆಎಡಬಲ ನೋಡದೆಹರಿಯ ಘನ ಶತ್ರುವಿನನಾಲಗೆ ಹಿಡಿದೆಳೆಯೆವೀರ ಮಂಡಿಯ ಹೂಡಿಅವುಡನೇ ಕಡಿಕಡಿದೇಹಾರಿಸಿದೆ ತಲೆಗಳನುಹಾ ಎನುತಲಿ ಬಿಡದೆ 2 ಮುಕುಟ ಕಾಂತಿಯಮಿಹಿರಕೋಟೆಯ ಕಳೆಯು ಹಳಿಯೆಲಕಲಕನೆ ಬೆಳಗುತಿಹಕುಂಡಲ ಸರಪಳಿಯೆಚಕಚಕನೆ ಮೂಗುತಿಯಮುತ್ತು ಹೊಳೆಹೊಳೆ ಹೊಳೆಯೇಸಬಲೆ ಎನಿಪ ಚಿದಾನಂದಬಗಳಾಂಬ ತಿಳಿಯೆ3
--------------
ಚಿದಾನಂದ ಅವಧೂತರು
ನಮ್ಮಯ್ಯ ಗುರು ನಾ ನಿಮ್ಮ ಮನಿಯ ಶ್ವಾನ ಹೆಮ್ಮೆಯೆಂಬ ಹಲ್ಲು ಮುರಿದೆ ಪೂರ್ಣ ಸುಮ್ಮನಿರುವೆ ಕಂಡು ಸಂತತ ಚರಣ ಒಮ್ಮನದಿಂದೆ ತೃಪ್ತ್ಯಾಯಿತು ಜೀವನ 1 ಸದ್ಭೋಧದನ್ನ ನೀಡಲು ಓಡಿಬಂದೆ ಸದ್ಗುರುವೆ ಒಡೆಯ ನೀನಹುದೆಂದೆ ಬಿದ್ದುಕೊಂಡಿಹೆ ನಾ ನಿಮ್ಮ ಮನೆಯ ಮುಂದೆ ಬುದ್ಧಿವಂತರು ಬೆನ್ನಟ್ಟಿ ಹೋಗೆ ಹಿಂದೆ 2 ಹಳಿಯೆಂದರೆ ನಾ ಹೋಗೆ ಎಂದೆಂದಿಗೂ ಬಿಟ್ಟು ಗುಹ್ಯ ವಾಕ್ಯದ ಹೆಜ್ಜೆ ಮೆಟ್ಟು ಸುಳವುದೋರಲು ನಿಮ್ಮ ಸದ್ಗತಿ ಮುಕ್ತಿಯುಂಟು ತಿಳದ್ಹಾಕಿಹನಾ ನಿಮ್ಮ ಪಾದರಕ್ಷಕೆ ಗಂಟು 3 ಬಾಗಿಲಕಾಯಿಕೊಂಡು ಬಿದ್ದಿಹ್ಯ ನಿಮ್ಮ ಶ್ವಾನ ಹಗಲಿರುಳು ನಾ ನಿಮ್ಮ ಬೊಗುಳವೆ ನಿಜಗುಣ ಜಾಗಿಸುವದೆನ್ನೊಳು ನಮ್ಮಯ್ಯ ನಿಮ್ಮ ಖೂನ ಸುಗುಮದಿಂದ ದೊರೆಯಿತು ನಿಜ ಸ್ಥಾನ 4 ಹಿಡಿದು ಕಚ್ಚಿಹೆ ನಿಮ್ಮ ಪಾದರಕ್ಷ ಸಂಪೂರ್ಣ ಬಿಡೆ ಎಂದೆಂದು ನಾ ಹೋದರೆ ಜೀವ ಪ್ರಾಣ ಪಿಡಿದು ಮಾಡುವೆ ನಾ ಜತನ ಮೂಢ ಮಹಿಪತಿಗಿದೆ ಸುಖಸಾಧನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು