ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಯಾವಾಗಲೂ ನಿನ್ನ ಸೇವೆಯೊಳಿರುವಂತೆ ಕಾವುದೆನ್ನಯ ನಿಜದೀ ಕೃಪಾನಿಧೇ ಈ ಪರಿಯಿಂದನಾ ಭಾರಿ ಭವದಿ ನೊಂದೆ ತೋರೋ ನಿನ್ನಯ ಚರಣಾ ನಾರಾಯಣ ಪ ಆಶಾಪಾಶದಲಿ ನಾ ಘಾಸಿಯಾದೆನು ದೇವಾ ವಾಸನೆಯೊಳು ತೊಳಲಿ ಬಹು ಬಳಲಿ ವಾಸುದೇವನೆ ನಿನ್ನ ಪಾದದೊಳಗೆನ್ನಯ ಬೇಸರದಲೆ ರಕ್ಷಿಸೋ ನಿಜಪಾಲಿಸೋ 1 ನೀರಮೇಲಿನ ಗುಳ್ಳೆಯಂತೆ ತೋರುವ ಕಾಯ ಸೇರಿ ನಂಬಿದೆ ಭರದಿ ಬಹು ವಿಧದಿ ದೂರನಾದೆನು ನಿಜದರಿವುನಾನರಿಯದೇ ಸೇರಿಸೊ ನಿಜ ಸುಖದಿ ಪ್ರಬೋಧದಿ 2 ನಂಬಿದವರ ಕಾಯ್ವ ಸಂಭ್ರಮ ಪೊತ್ತವ ಶಂಭು ಶಂಕರ ಪ್ರಿಯನೇ ಸರ್ವೇಶನೇ ಇಂಬು ದೋರೆನ್ನಾ ಚಿದಂಬರ ನಿಜಪದ ನಂಬಿ ನಿಲ್ಲುವ ತೆರದಿ ಸದೃಢದೀ 3 ತತ್ವಮಸಿ ಮಹಾ ವಾಕ್ಯವ ಶೋಧಿಸಿ ನಿಸ್ತರಿಸುವ ಭವವಾ ಉಪಾಯವಾ ಚಿತ್ತಚೈತನ್ಯವಾಗಿ ನಿತ್ಯಶಾಂತಿಸ್ವಸುಖ ಸತ್ಯ ಸದ್ಗುರು ಸ್ವಾನಂದಾ ಸಹಜಾನಂದಾ4 ಕಡಹದಾ ಮರನೇರಿ ಮಡುವಾ ಧುಮ್ಮಿಕೃಇದ್ಯೋ ಪಿಡಿದು ಕಾಳಿಂಗನಾ ಹೆಡೆ ಕುಳಿದು ಕುಣಿದ್ಯೋ ಸಡಗರದಿಂದಲಿ ಮಾತೆಯ ತೊಡೆಯ ಮೇಲೆ ಬಂದು ಕುಳಿತೆ5 ದುರುಳ ದುಷ್ಟರ ಶಿರವ ಶರದಿಂದಾ ಕಡಿದೆಯೊ ಶರಣ ಬಂದ ದೀನರನು ಸಲಹಿದೆಯೊ ಪರಮ ಪುರುಷನೇ ನಿನ್ನ ಸ್ಮರಣೆಯೊಳಿರಿಸೆನ್ನಾ 6 ಅನ್ಯಾಯದಲಿ ಕುರುಪತಿಯ ಮಡುಹಿದೆಯೊ ಕರ್ಣನ ಕಂಠವ ಕತ್ತರಿಸಿದೆಯೊ ಧನ್ಯಧರ್ಮಾರ್ಜುನರ ಶಿರವಾ ಸನ್ಮತದಿಂದಲಿ ಕಾಯ್ದೆ 7 ಪುಂಡಲೀಕನ ಭಕ್ತಿಗೆ ಮೆಚ್ಚಿ ಪಂಡರಪುರದಲ್ಲಿ ನಿಂತೆನಿ ಹೆಚ್ಚಿ ತಂಡತಂಡದಲ್ಲಿ ಬರುವ ಹಿಂಡುಭಕ್ತರುಗಳ ಕೂಡುವ 8 ಕಂತು ನಾರಾಯಣ ಶಾಂತಿ ಪದದಲಿ ವಿಶ್ರಾಂತಿಯ ಕೊಟ್ಟಿನ್ನಾ ಭ್ರಾಂತಿಗಳನೆಲ್ಲ ತೋರಿಸಿ ಸಂತ ಸಂಗದೊಳಿರಿಸೆನ್ನಾ 9
--------------
ಶಾಂತಿಬಾಯಿ
ತ್ರಿಜಗ ಪಾಲಿಸುವನೆ ಎಲ್ಲ ಸುಖವನಿತ್ತು ಉದಧಿ ಆಲಯ ಶರಣ್ಯ ವಿಟ್ಠಲ ಪ ಹೃದಯಕಮಲ ಮಧ್ಯದಲಿ ಮುದದಿ ಖಗವನೇರಿ ಚರಿಪ ಯದುಕುಲಾಬ್ಧಿ ಜಾತ ಚಂದ್ರ ವಿಧಿಶಿವಾದಿ ಉಡುಗಣಾರ್ಚಿತ 1 ದಿಟ್ಟಭಕ್ತ ಕೊಟ್ಟ ಇಟ್ಟಗೀ ಮೆಟ್ಟಿನಿಂತಿ ಸಿಟ್ಟು ಇಲ್ಲದೆ ಹೊಟ್ಟೆ ಮನೆಯ ಮಾಡಿಕೊಟ್ಟಿ ಕೆಟ್ಟಮಾತು ನುಡಿದ ಚೈದ್ಯಗೆ 2 ಕರಗಳನ್ನೆ ಕಟಿಯಲಿಟ್ಟು ಶರಣುಬಂದ ಭಕ್ತಗೆ ಭವ ಪರಿಮಿತಿಯ ತೋರಿ ನಿರುತ ಪೊರೆಯುವಂಥ ಕರುಣನಿಧಿಯೇ 3 ಪುಂಡರೀಕ ವರದನೆಂದು ಹಿಂಡುಭಕ್ತರು ಪೊಗಳುತಿಹರೊ ಪುಂಡರೀಕ ತೋರಿಸಿನ್ನು 4 ಶ್ರೀ ನರಹರಿಯೆ ನಿನ್ನ ಗಾನ ಮಾಡಲೆಷ್ಟು ಸಾಮ ಗಾನಕೆ ನಿಲುಕದ ಮಹಿಮ ಜ್ಞಾನ ಭಕ್ತಿ ಇತ್ತು ಬೇಗ 5
--------------
ಪ್ರದ್ಯುಮ್ನತೀರ್ಥರು
ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ