ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ನೊಂದೆ ನಾ ಹರಿಯೆನ್ನದೆ ಪ ವೈರಿ ಷಡ್ವರ್ಗದಾಟಗಳಿಂದ ನೊಂದೆ ನಾ ಹರಿಯೆನ್ನದೆ ಅ ಮಾಸ ತಾಯುದರದಲಿಸಂದೇಹವಿಲ್ಲ ನವಮಾಸ ಮಲ ಮೂತ್ರದೊಳುಒಂದಾಗಿ ನಿಂದು ಕುದಿಕುದಿದು ಹುಟ್ಟಿಬಂದೆ ಎಂಬತ್ತು ನಾಲುಕು ಲಕ್ಷ ಯೋನಿಯೊಳುನೊಂದೆ ಮುನ್ನೂರ ಅರವತ್ತು ಬೇನೆಗಳಿಂದಒಂದು ಕ್ಷಣವೂ ಯಮನ ಬಾಧೆ ತಾಳಲಾರೆನುಹಿಂದೆಗೆಯದಿರು ಇಂಬಿತ್ತು ಕಾಯೊ ಮುರಾರಿ 1 ಎಲುವುಗಳ ಗಳ ಮಾಡಿ ಬಲು ನರಂಗಳ ಬಿಗಿದುಚೆಲುವ ತೊಗಲಂ ಪೊದಿಸಿ ಮಜ್ಜೆ ಮಾಂಸವ ತುಂಬಿಹೊಲೆ ಗೂಡಿನೊಳು ಪೊಗಿಸಿ ತಲೆ ಹುಳಕ ನಾಯಂತೆಅಲೆದು ಮನೆಮನೆಯೆದುರು ಉಚ್ಚಿಷ್ಟವನು ತಿಂದುಕಳವು ಹಾದರ ಪಂಚಪಾತಕಂಗಳ ಮಾಡಿನೆಲೆಯಿಲ್ಲದಧಿಕತರ ನರಕದೊಳಗಾಳ್ದೆನೈಒಲಿದು ಬಂದು ರಕ್ಷಿಸು ನಾಗವೈರಿ ವಾಹನನೆನಳಿನ ಲೋಚನನೆ ನೀ ಎನ್ನ ಕೈ ಬಿಡದೆ 2 ಹುಟ್ಟುವಾಗಲೆ ಜಾತಕರ್ಮ ಷೋಡಶವೆಂಬಕಟ್ಟಳೆಯ ದಿವಸದಲಿ ನಂಟರಿಷ್ಟರು ಕೂಡಿಕಟ್ಟಿ ಮುಂಜಿಯ, ಹರುಷದಲಿ ಮದುವೆ ಮಾಡಿ ಉಂ-ಡುಟ್ಟು ಹಾಡಿ ಹರಸಿದರು ನೂರ್ಕಾಲ ಬದುಕೆಂದುಬಿಟ್ಟು ಪ್ರಾಣಂ ಪೋಗೆ ಪೆಣನೆಂದು ಮೂಲೆಯೊಳುಕಟ್ಟಿ ಕುಳ್ಳಿರಿಸಿ ಹೊಟ್ಟೆಯ ಹೊಯ್ದುಕೊಂಡಳುತಸುಟ್ಟು ಸುಡುಗಾಡಿನಲಿ ಪಿಂಡಗಳನಿಕ್ಕಿ ಬಲುಕಟ್ಟಳೆಯ ಕಾಣಿಸಿದರಯ್ಯ ಹರಿಯೆ 3 ಹಲವು ಜನುಮದಿ ತಾಯಿ ಎನಗಿತ್ತ ಮೊಲೆಹಾಲುನಲಿನಲಿದು ಉಂಬಾಗ ನೆಲಕೆ ಬಿದ್ದುದ ಕೂಡಿಅಳೆದು ನೋಡಿದರೆ ಕ್ಷೀರಾಂಬುಧಿಗೆ ಎರಡು ಮಡಿಹಲವಾರು ಸಲ ಅತ್ತ ಅಶ್ರುಜಲವನು ಕೂಡಿಅಳೆದು ನೋಡಿದರೆ ಲವಣಾರ್ಣವಕೆ ಮೂರು ಮಡಿಎಲುವುಗಳ ಕೂಡಿದರೆ ಮೇರುವಿಗೆ ನಾಲ್ಕು ಮಡಿಸುಲಿದು ಚರ್ಮವ ಹಾಸಿದರೆ ಧರೆಗೆ ಐದು ಮಡಿನೆಲೆ ಯಾವುದೀ ದೇಹಕೆ ನರಹರಿಯೆ4 ಸತಿ ಇಂದು ಕಾಯ್ವರದಾರುದಂದುಗವನಿದನೆಲ್ಲ ನೀಬಲ್ಲೆ ನಾನರಿಯೆತಂದೆ ನೆಲೆಯಾದಿಕೇಶವನೆ ನಿನ್ನಯ ಪಾದದ್ವಂದ್ವವನು ಎಂದಿಗೂ ಬಿಡೆನು ಬಿಡೆನೊ 5
--------------
ಕನಕದಾಸ