ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತ್ಯಾದ ನಡಿ ಹಿಡಿರೋ ಮನಜರು ಸತ್ಯದಾ ನಡಿಗಿನ್ನು ಮತ್ತೊಂದು ಭಯವಿಲ್ಲ ಧ್ರುವ ಸತ್ಯದಾನಡಿಗಿನ್ನು ಸತ್ಯ ನುಡಿಯಲು ಬೇಕು ಸತ್ಯಂ ಸತ್ಯ ಶರಣರೆಲ್ಲಾ ಎತ್ಯಾಡಿಸುವಂತೆ ಮೈಯೊಳಗಿಹ ಕಾವನೈಯನ ಮರಿಯಬ್ಯಾಡಿ 1 ಹುಸಿಯಾಡಿ ನೀವಿನ್ನು ಘಾಸಿಗೆ ಬೀಳಲಿ ಬ್ಯಾಡಿ ವ್ಯಸನಕಾಗಿ ಬಿದ್ದು ದೆಶೆಗೆಟ್ಟು ಹೋಗಬ್ಯಾಡಿ 2 ಅಶೆಯಕೊಟ್ಟು ನಿರಾಶಯೆ ಮಾಡಲಿಬ್ಯಾಡಿ ಘಾಸಿ ಮಾಡಲಬ್ಯಾಡಿ 3 ಘಟ್ಟಿಸಿ ಒಬ್ಬರ ಹೊಟ್ಟೆಹೊರಿಯಬ್ಯಾಡಿ ಸಿಟ್ಟಿಲಿ ನೆಂಟರು ತುಟ್ಟಿಸಿ ಬಿಡಬ್ಯಾಡಿ4 ಗುಟ್ಟಿನೊಳಿಹ ಮಾತು ತುಟ್ಟಿಗೆ ತರಬ್ಯಾಡಿ ಹೊಟ್ಟೆಲೆ ಹಡೆದವರ ಕಟ್ಟಿಗೆ ತರಬ್ಯಾಡಿ 5 ಲೆತ್ತಪಗಡಿ ಅಡಿ ಹೊತ್ತುಗಳಿಯಬ್ಯಾಡಿ ತುತ್ತುಕುಡಿಯೊಳಿದ್ದಾ ಪತ್ತಬಡಲಿಬ್ಯಾಡಿ 6 ಹರಿಹರ ಭಕ್ತಿಗೆ ಬ್ಯಾರೆ ನೋಡಲಿಬ್ಯಾಡಿ ಗುರುಕೃಪೆ ಪಡೆದಿನ್ನು ಗುರುತಿಟ್ಟು ನೋಡಿರೋ 7 ಅನ್ನಬೇಡಿದವ ಗಿಲ್ಲೆನ ಬ್ಯಾಡಿ ಹೊನ್ನು ಹೆಣ್ಣಿನ ಮ್ಯಾಲೆ ಕಣ್ಣಿಟ್ಟು ಕೆಡಬ್ಯಾಡಿ 8 ಅಂತರಾತ್ಮದ ಪರಮಾತ್ಮನ ತಿಳಕೊಳ್ಳಿ ಸ್ವಾತ್ಮ ಸುಖದ ಸವಿ ಸೂರ್ಯಾಡಿಕೊಳಲಿಕ್ಕೆ 9 ಸ್ವಹಿತ ಸುಖದ ಮಾತು ಸಾಧಿಸಿಕೊಳಲಿಕ್ಕೆ ಮಹಿಪತಿ ಹೇಳಿದ ಮಾತು ಮನ್ನಿಸಿ ತಿಳಿಕೊಳ್ಳಿ 10
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು