ಒಟ್ಟು 5 ಕಡೆಗಳಲ್ಲಿ , 1 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಹ್ಯಾಂಗಿರಲಿನ್ನು ರಂಗನ ಬಿಟ್ಟಿನ್ನಹ್ಯಾಗಿರಲಿಂನು ಮಂಗಳಾತ್ಮಜ ಹೆಳವನಕಟ್ಟೆರಂಗನ ಬಿಟ್ಟು ಹ್ಯಾಂಗಿರಲಿಂನು ಪ. ಸಿರಿಮನೋಹಾರಿ ಶರಣರಿಗಂತ:ಕರಣವ ತೋರಿ ತ್ವರಿತದಿದಿವ್ಯರಥಗಳನ್ನು ನೀಡಿ ಪರಮಾ ಸಂಭ್ರಮದಿಂದಾಯಿರುವೋನ ಮರದು ನಾ ಹ್ಯಾಂಗಿರಲಿನ್ನೂ 1 ಗಿರಿಮನಿ ಮಾಡಿ ಶರಣಗರಿತ:ಕರುಣವ ನೀಡಿ ಸರಸದಿ ಮನೋರಥಗಳ ತೋರಿ ಪರಮಾ ಸಂಭ್ರಮದಿಂದಾ ಇರುವನ ಮರದು ನಾ ಹ್ಯಾಂಗಿರಲಿನ್ನೂ 2 ಶರಣು ಪೊಕ್ಕಿರುವಾ ಗಿರಿಯಮ್ಮಗಾ ತುರದಿ ವಲಿದಿರುವ ಸರಕಿರಿಗೆಜ್ಜೆ ಧರಿಸಿ ಕುಣಿದಿರುವ ಸಿರಿನಾರಸಿಂಹನ ಚರಣವಾ ಮರೆದು ನಾ ಹ್ಯಾಂಗಿರಲಿನ್ನೂ 3
--------------
ಹೆಳವನಕಟ್ಟೆ ಗಿರಿಯಮ್ಮ
ಎಂದು ಕಾಹು(ಣು?)ವೆ ಎನ್ನ ಮನೋಹರ ಎಂದಿ[ಗೆಕಾ] ಹುದಿನ್ನೆಂದಿಗೆ ಬಂದೆ ಭವಭವಭವವೀ ದುಃಖದಿ ನೊಂದೆನೊ ರಂಗನಂಘ್ರಿ ಚರಣವ ಪ. ಮಂಗಳಾಂಗನ ಮಾಧವನ ಕೋಟಿ ಅಂಗಜಜನಕವಿಲಾಸನ ಗಂಗಾಜನಕನ ಗರುಡವಾಹನ ತುಂಗವಿಕ್ರಮನಂಘ್ರಿ ಚರಣವ 1 ಕಂತುಜನಕನ ಕಮಲನಾಭನ ಸಂತತದ ಸರ್ವೇಶನ ಯಂತ್ರವಾಹಕ ಎನ್ನ ಒಡೆಯನ ಚಿಂತಾಯ[ಕ]ನ ಶ್ರೀ ಚೆಲುವಚರಣವÀ 2 ಪರಮಪುರುಷನ ಪುಣ್ಯನಾಮನ ಶರಣುಜನಸರ್ವೇಶನ ಕರುಣಿ ಹೆಳವನಕಟ್ಟೆರಂಗನ ಚರಣ[ವ]---------- 3
--------------
ಹೆಳವನಕಟ್ಟೆ ಗಿರಿಯಮ್ಮ
ಭೀಮಾ ಹೋ ಭಲಾರೆ ನಿಸ್ಸೀಮ ಹೋ ಭಾಪುರೆ ಹನುಮ ಹೋ ಪ. ನಿಜಜಿತಕಾಮ ಹೋ ಕಾರುಣ್ಯಧಾಮ ಹೋ ರಾಮಚಂದ್ರನ ಚರಣಕಮಲಸರಾಮ ಕಾರ್ಯಧುರಂಧರನೆ ಅ.ಪ. ಆಂಜನೇಯ ಸುಕುಮಾರ ಅದ್ಭುತಮಹಿಮ ರಾಮ[ನ] ದೂತನೆ ಅಂಜದುದಧಿಯ ದಾಟಿ ಅಸುರನ[ವ] ನವ ಕಿತ್ತನೆ ಕಂಜಮುಖಿ ಜಾನಕಿಗೆ ಮುದ್ರೆಯನಿತ್ತ ಬಲುಪ್ರಖ್ಯಾತನೆ ಮಾಡಿಸಿದೆ ಕಲಿ 1 ಅವನಿತನುಜೆಯ ಚೂಡಾರತ್ನವ ಅಂಬುಜಾಕ್ಷನಿಗಿತ್ತನೆ ಸಮರಕನುಕೂಲವೆಂದು ರಾಮಗೆ ಸುಗ್ರೀವನ ಕಾಣಿಸಿದನೆ ಕಮಲನಾಭನ ಆಜ್ಞೆಯಿಂದಲಿ ಕಪಿಬಲವ ಕೂಡಿಸಿದನೆ ಬಹುಪರಾಕ್ರಮಿಯಹುದಹುದೊ ಕಲಿ 2 ಅಗಳುಸಾಗರ ಮಧ್ಯದಲ್ಲಿಹ ನಗರವನು ಬಂದು ಮುತ್ತಿದೆ ಬಗೆದು ಕಲ್ಮರಗುಂಡಿನಿಂದಲಿ ವಿಗಡದೈತ್ಯರ ಮಡುಹಿದೆ ಬಗೆಬಗೆ ಮಯಾಜಾಲವನು ಗೆದ್ದು ಭರದೊಳದ್ರಿಯ ತುಡುಕಿದೆ ಜಗತ್ಪತಿಯ ಮೂರ್ಬಲವನೆಲ್ಲವ ಸಂಜೀವನವ ತಂದುಳುಹಿದೆ 3 ಪೃಥ್ವಿಯೊಳಗುದ್ದಂಡ ದೈತ್ಯರ ಸುತ ಸಹೋದರರ ಮಡುಹಿದೆ ಹತವ ಮಾಡಿ ಶ್ರೀರಾಮ ಬಾಣದಿ ಹತ್ತು ತಲೆಗಳ ಕೆಡಹಿದೆ ಪ್ರತಿಶತೇಶ್ವರ ಶ್ರೀರಮಣಿಯನ್ನು ತಂದು ರಾಘವಗೆ ಒಡಗೂಡಿಸಿದೆ ಮಾಡಿಸಿದೆ ಕಲಿ 4 ಕುಂಡಲ ಚಾರು ಯಜÉ್ಞೂೀಪವೀತನೆ ಸೂರ್ಯಚಂದ್ರಮರುಳ್ಳನಖ ವಜ್ರಕಾಯದಲಿ ನಿರ್ಭೀತನೆ ವೀರಕದನಕಠೋರ ರಾಣಿಬೆನ್ನೂರ ಬಯಲಾಂಜನೇಯನೆನೀರಜಾಕ್ಷನ ಹೆಳವನಕಟ್ಟೆರಂಗನ ಪ್ರಿಯದಾಸನೆ ಕಲಿ 5
--------------
ಹೆಳವನಕಟ್ಟೆ ಗಿರಿಯಮ್ಮ
ಯಾಕೆ ಬಾರನಕ್ಕಯ್ಯ ಎನ್ನಯ ಪ್ರಾಣನಾಥನ ಕರೆತಾರೆ ಸೈರಿಸಲಾರೆ ಪ. ಸೋಗೆಗಂಗಳ ಸನ್ನೆ ಮಾಡಿ ಪೊಳೆದು ಪೋದ ಮೇಘದ ಮಿಂಚಿನಂತೆ ಮಂದರೋದ್ಧಾರ ಬಾಗಿದ ಮುಖವೆತ್ತಿ ಎನ್ನ ನೋಡದೆ ಪೋದ ಹ್ಯಾಂಗ ಮಾಡಲಿ ಸಖಿಯೆ ಹೇಳಲಿ ಪ್ರಿಯೆ 1 ಕರವೊಡ್ಡಿ ಬೇಡಿಕೊಂಡರೆ ಒಲ್ಲದೆ ಪೋದ ಕರೆದರೆ ಪಿತನಾಜ್ಞೆ ತೋರುತಾನೆ ನಿರುತದಿ ಏಕಪತ್ನಿಯ ವ್ರತನೆನುತ ಸರಿಬಂದ ಸತಿಯರ ಒಡನಾಡುತೈದಾನೆ ಗರುವತನವ ಬಿಡನೆ ಗೋವ ಕಾಯ್ವವನೆ 2 ಸುಮ್ಮನೆ ಲಜ್ಜೆಭಂಗವ ಮಾಡಿ ಪೋದನೆ ಒಮ್ಮೆ ಮನೆಗೆ ಬಾರನೆ ವಾಜಿವಾಹನನೆ ತಮ್ಮ ಧ್ಯಾನದೊಳೆನ್ನ ಮನಸು ನಿಲ್ಲಿಸಿ ಪರ- ಬೊಮ್ಮ ಮೂರುತಿ ಹೆಳವನಕಟ್ಟೆರಂಗನ ಘಮ್ಮನೆ ಕರೆದುತಾರೆ ಸೈರಿಸಲಾರೆ 3
--------------
ಹೆಳವನಕಟ್ಟೆ ಗಿರಿಯಮ್ಮ
ವಿಶ್ವಪತಿ ಇಂದುಶೇಖರ ಸುರಮಸ್ತಕಮಣಿ ಮನ್ಮಥರಿಪುವೆ ವಿಸ್ತರಿಪೆನು ನಿಮ್ಮ ಮಹಿಮೆಯ ಜಗದೊಳು ಸ್ವಸ್ಥವಾಗಿ ಪ. ಎಲ್ಲಿ ನೋಡಲು ಲಿಂಗಮಯವು ಅಲ್ಲಿಗಲ್ಲಿಗೆ ತೀರ್ಥಯಾತ್ರೆಯು ಸೊಲ್ಲು ಸೊಲ್ಲಿಗೆ ಹರಮಹಾದೇವಂತೆಲ್ಲರು ಸ್ತುತಿಸುವರು ಬಲ್ಲವರು ಇದು ಭಾವಿಸಿ ಕಾಶಿಗಿಂತ ಮಹಿಮೆ ವೆಗ್ಗಳವಹುದೆನುತ ಸುಲಕ್ಷಣೆ ಶಿವಗಾತ್ರೆ ಶಿವನವಲ್ಲಭೆ ತ್ರಾಸಿನಲಿ ತೂಗುವಳು 1 ನಾಟಕದಿ ನಾನಾಜನ್ಮದಿ ಬಂದು ದಾಟದಂತರವನಳಿದನು ಚಂದ್ರ ಕೋಟಿತೀರ್ಥದಿ ಮಿಂದು ಮೈಯ ಕೋಟಲೆ ಸಂಸಾರಗಳೆಲ್ಲ ದಾಟಿದೆನು ಇನ್ನು ಜನನಮರಣಗಳೆಂಬೋಪಾಯಗಳಿಲ್ಲವು 2 ಕೂಪಾರದಲಿ ಬಂದು ಸೂಸುವ ತೆರೆಗಳು ಅಭ್ರದಿಂದಲಿ ಅಪ್ಪಳಿಸಲು ಉನ್ನತ ಭ್ರಮೆಗೊಂಡಿದ್ದ ಕರ್ಮದ ಬಲಿಗಳು ಮಿಗಿಲಾದವು ಉರ್ವಿಯೊಳಗುಳ್ಳ ಸಕಲನದಿಗಳನು ಗರ್ಭದಲಿ ಇಂಬಿಟ್ಟು ಮೆರೆದಂತಿಹ ಸರ್ಬಗೂಡಿಸುವ ಸಿಂಧುರಾಜನಲಿ ಮಿಂದು ನಿರ್ಭಯಳಾದೆನು 3 ಬಲಿದ ದನುಜನ ಭಾವಕ್ಕೆ ಮೆಚ್ಚಿ ಒಲಿದಷ್ಟವರವಿತ್ತ ಸಿಲುಕಲು ಸುಲಭನೆಂದು ಹೇರಂಬನೊಳಿತ್ತು ನೆಲೆಗೊಳಿಸಿ ಎಳೆದರೆ ಎಳೆಯಲೊಲ್ಲದೆ ಛಲವಿಡಿದ ಲಂಕಾಧಿಪತಿಯ ಅಹಂಕಾರ ವಳಿದು ಇಂದ್ರಾದಿಗಳಿಗೆ ವರವಿತ್ತ ಮಹಾಬಲಲಿಂಗನ ಕಂಡೆ 4 ಅನ್ನದಾ ಶತಶೃಂಗ ಪರ್ವತ ಪಶ್ಚಿಮದಿಂದ ಪಾತಾಳಗಂಗೆ ಸಹಿತಲಿ ಪ್ರ- ಸನ್ನನಾಗಿ ನಿಂದ ಚೆನ್ನ ಹೆಳವನಕಟ್ಟೆರಂಗನ ಪ್ರಿಯ ಪನ್ನಂಗಧರ ಪರಮಪವಿತ್ರ ಗೋಕರ್ಣೇಶನ ಕಂಡೆ ಪಾ- ವನವಾಯಿತು ಎಲ್ಲಾ ಕುಲಕೋಟಿಯು 5
--------------
ಹೆಳವನಕಟ್ಟೆ ಗಿರಿಯಮ್ಮ