ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಯಾಡಿ ಬಂದ್ಯೋ ಮುದ್ದು ರಂಗಯ್ಯಾ ನೀ - * ನೆಲ್ಯಾಡಿ ಬಂದ್ಯೋ ಎನ್ನ ಕಣ್ಣ ಮುಂದಾಡದೆ ಪ ಆಲಯದೊಳಗೆ ನೀನಾಡದೆ ಬೆಣ್ಣೆ ಪಾಲು ಸಕ್ಕರೆಯನೊಲ್ಲದೆ ಚಿಕ್ಕ ಬಾಲೇಯರೊಳು ನೀನಾಡದೆ ಬಾಲಯ್ಯ ನೀಯೆನ್ನ ಕಣ್ಣ ಮುಂದಾಡದೆ 1 ಬಿಟ್ಟ ಮುತ್ತಿನ ಬೊಗಸೆ ಕಂಗಳು ಫಣಿಯೊಳಿಟ್ಟ ಕಸ್ತೂರಿ ತಿಲಕ ಗಂಧವು ದಿಟ್ಟತನದಿ ಬರುವ ಅಂದವು ಮುದ್ದು ಕೃಷ್ಣ ನೀಯೆನ್ನ ಕಣ್ಣ ಮುಂದಾಡದೆ 2 ಅಷ್ಟದಿಕ್ಕಲಿ ಅರಸಿ ಕಾಣದೆ ಬಾಳ ದೃಷ್ಟಿಗೆಟ್ಟೆನೊ ನಿನ್ನ ನೋಡದೆ - ನ್ನೆಷ್ಟು ಪೇಳಲಿ ಹೇಳಬಾರದೆ ಶ್ರೀದ - ವಿಠಲ ನೀಯೆನ್ನ ಕಣ್ಣ ಮುಂದಾಡದೆ 3
--------------
ಶ್ರೀದವಿಠಲರು
ನಿನ್ನ ಮಗನ ಲೀಲೆಯ ತಾಳಲಾರೆವೆ ನಾವುತರಳನ ದುಡುಕು ಹೇಳಬಾರದೆ ಗೋಪಾಲಕೃಷ್ಣಗೆಬುದ್ಧಿ ಅಮ್ಮ ಪ ಇಂದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೇ ಯಶೋದೆ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕು ಪಾಲು ಬೆಣ್ಣೆ ಮೊಸರೆಲ್ಲವ ಮೆದ್ದುಕೋಲಲ್ಲಿ ನೀರ ಕೊಡವ ಒಡೆದನೇಅಸಲ ವರ್ಣನವ ದಿಟ್ಟ ನಿತ್ಯಾ ಇವನ ಹೋರಾಟಹೆಬ್ಬಾಲೆಯರಲ್ಲಿ ನೋಟ ಬಹಳ ಬಗೆಯಲಿಪಿಡಿದೇವೆಂದರೆ ಮೇಲಿಯಂಜಲುಗಳವೋಡಿದಾಅಮ್ಮ ಇದು ಚೆನ್ನಾಯಿತು 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನಲಿ ಜಲಕ್ರೀಡೆಯಾಡಲುಚಿತ್ತಚೋರ ಸೀರೆಗಳನೆಲ್ಲವ-ನೆತ್ತಿಕೊಂಡು ಮರವನೇರಿದನವ್ವಾಬೆತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಈ ಯುಕ್ತಿಗಳೇ ಬಹುಬಲ್ಲಹತ್ತಿಲಿ ಬಂದು ಕರವೆತ್ತಿ ಮುಗಿದರೆವಸ್ತ್ರಗಳೆಲ್ಲವ ಕೊಡುವೆನೆಂದನೇ ಅಮ್ಮ 2 ಜಾರ ನೀನೆಂದರೆಪರಿಹಾಸ್ಯವ ಮಾಡಿದ ರಂಗವಿಠಲನ ಅಮ್ಮ3
--------------
ಶ್ರೀಪಾದರಾಜರು
ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5
--------------
ಪುರಂದರದಾಸರು