ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನ್ಯ ಸತ್ಸಂಗ ಎನ್ನೊಳು ಹೊಳೆಯಿತು ಘನಲಿಂಗ ಧ್ರುವ ನೋಡಿದವನ ನೋಟ ಮಾಡಿತೆನ್ನೊಳು ಜೀವ ಶಿವಕೂಟ ನೀಡಿದಾಭಯದೂಟ ಗೂಢಗುರುತವಾಯಿತು ನೀಟ 1 ಹೇಳಿದವನ ಮಾತು ಹೊಳೆಯುವ ಸುಪ್ಪಾಣಿಯ ಮುತ್ತು ತಿಳಿಯಿತೆನ್ನೊಳು ವಸ್ತು ಅಳಿಯಿತು ಜನ್ಮ ಮೃತ್ಯು 2 ಸತ್ಸಂಗವ ಕೂಡಿ ಪತಿತಪಾವನವಾದನು ನೋಡಿ ಕ್ಷಿತಿಯೊಳು ನಿಜಗೂಡಿ ಗತಿಪಡೆದನು ಮಹಿಪತಿ ನೋಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮುಳ್ಳು ಮೊನಿಯ ಮ್ಯಾಲ ಮೂರು ಕೆರಿಯ ಕಟ್ಟಿಎರಡು ಹೂಳು, ಒಂದು ತುಂಬಲೆ ಇಲ್ಲ 1 ತುಂಬದ ಕೆರೆಗೆ ಮೇಯಾಕ ಬಂದವು ಮೂರು ಎಮ್ಮಿಎರಡು ಗೊಡ್ಡು ಒಂದು ಕಂದು ಹಾಕಿ ಕರುವೇ ಇಲ್ಲ 2 ಕರುವಿಲ್ಲದ ಎಮ್ಮಿಯ ಕೂಡಿದರ ಮೂವರು ಹೆಣ್ಮಕ್ಕಳಾಇಬ್ಬರು ಬಂಜಿಯರು, ಒಬ್ಬಾಕಿ ಹಡೆದೇ ಇಲ್ಲ 3 ಹಡೆಯದ ಹೆಣ್ಣ ಕೂಡಿಕೊಂಡರು ಮೂವರು ಕುಂಬಾರರುಇಬ್ಬರು ಚೊಂಚರು, ಒಬ್ಬಗೆ ಕೈಯೇ ಇಲ್ಲ 4 ಕೈಯಿಲ್ಲದ ಕುಂಬಾರ ಮಾಡಿಕೊಟ್ಟ ಮೂರು ಮಡಿಕಿಗಳಎರಡು ದದ್ದು, ಒಂದಕೆ ತಳವೆ ಇಲ್ಲ5 ತಳವಿಲ್ಲದ ಮಡಕಿಗಿ ಕೊಟ್ಟಾರ ಮೂರು ರೊಕ್ಕಎರಡು ನಕಲು, ಒಂದು ಸವಕಲು 6 ಸವಕಲು ರೊಕ್ಕದಾಗ ಕುಚ್ಚಲಿಕೆ ತಂದಾರ ಮೂರ ಕಡುಬಎರಡು ಕುದಿಯಲಿಲ್ಲ ಒಂದು ಬೇಯಲಿಲ್ಲ 7 ಬೇಯದ ಕಡುಬಿಗಿ ಬಂದಾರ ಮೂವರು ಬೀಗರಇಬ್ಬರು ಬೊಚ್ಚರು, ಒಬ್ಬಗೆ ಹಲ್ಲೇ ಇಲ್ಲ 8 ಹಲ್ಲಿಲ್ಲದ ಬೀಗನಿಗೆ ಕೊಟ್ಟಾರ ಮೂರು ಚಿಕಣಿ ಅಡಕಿಎರಡು ಗೋಟು, ಒಂದು ಸಿಡಿದು ಕಾಣೆಯಾಯಿತು 9 ಕಾಣೆಯಾದ ಅಡಿಕಿಯ ನೋಡಾಕಂತ ಹೋಗ್ಯಾರ ಮೂರ ಮಂದಿಇಬ್ಬರು ಒಂಚೊರಿ, ಒಬ್ಬಗೆ ಕಣ್ಣೇ ಇಲ್ಲ10 ಕಣ್ಣಿಲ್ಲದವನ ಕರೆತರಬೇಕಂತ ಹೋಗ್ಯಾರ ಮೂರ ಮಂದಿಇಬ್ಬರು ಕುಂಟರು, ಒಬ್ಬಗೆ ಕಾಲೇ ಇಲ್ಲ 11 ಕಾಲಿಲ್ಲದವನ ಹೊತ್ತು ತರಬೇಕಂತ ಹೋಗ್ಯಾರ ಮೂರು ಮಂದಿ ಇಬ್ಬರು ಲಂಡರು, ಒಬ್ಬ ಮೊಂಡ 12 ಕಾಗಿನೆಲೆ ಕನಕದಾಸ ಹಾಕಿದ ಮುಂಡಗಿಇದ ತಿಳಿದವ ಜಾಣ. ಒಡೆದು ಹೇಳಿದವ ಕೋಣ13
--------------
ಕನಕದಾಸ
ತಾಳಿಯ ಹರಿದು ಬಿಸಾಡೆ ನೀಹೇಳಿದವರ ಮಾತ ಕೇಳೇ ಗೈಯ್ಯಾಳಿ ಪ.ಎಲ್ಲಮ್ಮ ಎಕಲಾತಿ ಉರಿಮಾರಿ ಉಡತಮ್ಮಬುಲ್ಲ ಮಹಿಸಾಸುರ ದೈವವೆಂದೆಎಲ್ಲ ದೈವಗಳು ನಾಯಾಗಿ ಹರಿವಾಗಕಳ್ಳದೇವರ ನೆಚ್ಚಿ ಕೆಡಬೇಡ ಮೂಳಿ 1ಕೊರಳೊಳು ಕವಡಿಯ ಶಿರದಲಿ ಹಡಲಿಗೆಕರದಲಿ ದೀವಟಿಗೆ ಉರಿಸುತಲಿಉರಿವ ಪಂಜನೆ ಪಿಡಿದು ಉಧೋ ಉಧೋ ಎನುತಲಿತಿರುಗಿದ ಕೇರಿಗುಂಟ ಮೂಳಿ 2ಸೀಡಿಯ ಮುಳ್ಳನೆ ತಂದು ನಡುಬೆನ್ನಲೂರಿಕೊಂಡುಒಡೆಯ ಮಲ್ಲಣನೆಂದು ಜೋಲಾಡುಕಡುಹರಿ ಯಮದೂತರು ಬಂದು ಎಳೆವಾಗಒಡೆಯ ಮೆಲ್ಲುಣ್ಣೆತ್ತು ಹೋದನೆ ಮೂಳಿ 3ಗುಂಡಿಗೆ ಎಣ್ಣೆಯ ಎಡಗೈಯಲಿಟ್ಟು ಕೊಂಡುಗುಂಡಿಗೆ ತುಪ್ಪವ ಮುಂದಿಟ್ಟು ಕೊಂಡುಮಿಂಡೆ ಮೈಲಾರಿಯ ಖಂಡೆರಾಯನೆಂದುಕೆಂಡದ ಮೇಲೆ ರೊಟ್ಟಿಯ ಸುಟ್ಟು ಮೂಳಿ 4ಹೊನ್ನುನಾಗರ ಮಾಡಿ ಬಣ್ಣಿಸಿ ಕಿವಿಗಿಟ್ಟುನನ್ನಯ್ಯ ನಾಗಪ್ಪ ಸಲುಹೆನ್ನುತಚಿನ್ನನಾಗರ ಬಂದು ಓಡಾಡಿ ಕಡಿವಾಗಹೊನ್ನನಾಗರ ಎತ್ತ ಹೋದನೆ ಮೂಳಿ 5
--------------
ಪುರಂದರದಾಸರು