ಒಟ್ಟು 3 ಕಡೆಗಳಲ್ಲಿ , 1 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ದಯವದೋರೋ ದೇವ ಭಕುತ ಭಯನಿವಾರ ಅಭವ ಪ ದಯವದೋರೋ ನಿನ್ನ ಪಾವನಪಾದ ಸು ಸೇವಕ ಜನಮಹಜೀವ ಜಾನಕೀಧವ ಅ.ಪ ಪಾಪಗೆಲಿಯ ಬಂದೆ ಸಂಸಾರ ಕೂಪದೊಳಗೆ ನಿಂದೆ ಕೋಪಜ್ವಾಲದಿ ಬೆಂದೆ ವಿಷಯ ತಾಪತ್ರಯದಿನೊಂದೆ ಆ ಪರಲೋಕದ ವ್ಯಾಪಾರ ಮರೆದಿಹ್ಯ ದ್ವ್ಯಾಪಕನಾಗಿ ಬಲುತಾಪಬಡುವೆ ತಂದೆ 1 ಅಂಗಮೋಹವ ಬಿಡಿಸೋ ನಿನ್ನವರ ಸಂಗವ ಕರುಣಿಸೊ ಭಂಗವ ಪರಹರಿಸೊ ಜಗದವ ರ್ಹಂಗಹನು ತಪ್ಪಿಸೊ ಮಂಗಳಾತ್ಮ ನಿನ್ನ ಮಂಗಳಾಮೂರ್ತಿ ಎನ್ನ ಕಂಗಳೋಳ್ನಿಲ್ಲಿಸಿ ಹಿಂಗದಾನಂದ ನೀಡು 2 ದೋಷದಾರಿದ್ರ್ಯ ಹರಿಸೊ ಮನದ ಅಶಾಪಾಶ ಬಿಡಿಸೊ ಹೇಸಿಪ್ರಪಂಚ ಗೆಲಿಸೊ ಸುಜನರಾ ವಾಸ ತೀವ್ರ ಪಾಲಿಸೊ ದೋಷನಾಶ ಜಗದೀಶ ಶ್ರೀರಾಮ ನಿನ್ನ ದಾಸಾನುದಾಸೆನಿಸಿ ಪೋಷಿಸು ಸತತ 3
--------------
ರಾಮದಾಸರು
ವಿಠಲ ನಮೋ ವಿಠಲ ಮುಟ್ಟಿಭಜಿಪ ದೀನನಿಷ್ಟಾರ್ಥ ಪಾಲಿಸು ಪ ಹೇಸಿಪ್ರಪಂಚದಿ ನಿಂದು ಮಹ ಕ್ಲೇಶಪಂಚಕದಲಿ ಬೆಂದು ಕೆಟ್ಟ ವಾಸನತ್ರಯದಿಂದ ನೊಂದು ಬಲು ಘಾಸಿಯಾದೆ ದಯಾಸಿಂಧು ಆಹ ದೋಷದೂರನೆ ಎನ್ನ ದೋಷನಾಶನ ಗೈದು ಪೋಷಿಸು ಅನುಮೇಶ ದಾಸನೊಳ್ದಯವಾಗಿ 1 ಮರವೆಯೆಂಬುವ ಕವಚ ತೊಟ್ಟು ಬಲು ದುರುಳತನಕೆ ಮನಗೊಟ್ಟು ಮಹ ದರಿವಿನ ಅರಮನೆ ಸುಟ್ಟು ಆಹ ಪರಮದುರಿತದಿ ಬಿದ್ದು ಮರುಳನಾಗಿ ನಿಮ್ಮ ಚರಣಸರೋಜಕ್ಕೆ ಮರೆಹೊಕ್ಕೆ ಕರುಣಿಸು 2 ಹೊಂದಿ ಭಜಿಪೆ ನಿನ್ನ ಬೇಡಿ ಎನ್ನ ಮಂದಮತಿಯ ಕಡೆಮಾಡಿ ನಿಜಾ ನಂದ ಸುಜ್ಞಾನಪದ ನೀಡಿ ಭವ ಬಂಧ ಸಂಕೋಲೆ ಗಡ ಕಡಿ ಆಹ ಸಿಂಧುನಿಲಯ ಬೇಗ ದಂದುಗ ಪರಿಹರಿಸಿ ಕಂದನ್ನ ಉದ್ಧರಿಸು ತಂದೆ ಶ್ರೀರಾಮಯ್ಯ 3
--------------
ರಾಮದಾಸರು