ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ ಪ ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ1 ಕಲುಷ ಮಾಧವ 2 ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ 3 ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ 4 ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ 5 ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಮಾಡಿಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ 6 ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ 7 ಸದನ ಮಾಡು ಮುದದಿ ಶ್ರೀಧರ 8 ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ 9 ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ10 ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ 11 ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ12 ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ 13 ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ 14 ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ 15 ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ಚರಣದಲ್ಲಿ ಕ್ಷೇಮ ಪುರುಷೋತ್ತಮ 16 ಅಧೋಕ್ಷಜ 17 ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ 18 ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ19 ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ 20 ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ 21 ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ22 ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ23 ಸತ್ಯವಾದ ನಾಮಗಳನು ನಿತ್ಯದಲ್ಲಿ ಪಠಿಸುವವರಅರ್ತಿಯಿಂದ ಕಾಯದಿರನು ಕರ್ತೃ ಕೇಶವ 24 ಮರೆತು ಬಿಡದೆ ಹರಿಯ ನಾಮ ಬರೆದು ಓದಿ ಕೇಳುವರಿಗೆಕರೆದು ಮುಕ್ತಿ ಕೊಡುವ ಬಾಡದಾದಿಕೇಶವ 25
--------------
ಕನಕದಾಸ
ಕುಡಿಸೆನಗೆ ಹರಿ ನಿನ್ನ ನಾಮರಸವ ಪ ಕೊಡಬೇಡ ಅನ್ಯರಸ ಹಸಿದಿದ್ದರೂ ಇರುವೆ ಅ.ಪ ಜನರ ಮನ್ನಣೆ ದೃಷ್ಟಿ ಕನಸಿನಲಾದರೂ ಬೇಡ ಮನವು ನಿನ್ನಲಿ ಸತತ ನೆಲಸಿರಲಿ ಸ್ವಾಮಿ ತೃಣವನು ಘನ ಮಾಳ್ಪ ಅನಿಲಮಂದಿರವಾಸ ಪ್ರಣತಪಾಲಕ ನಿನ್ನ ಮೊರೆಹೊಕ್ಕೆನಯ್ಯ 1 ನಿಜ ಭಕ್ತ ಪದವೀಯೊ ಋಜುವರ್ಗ ಸಂಪೂಜ್ಯ ಅಜ ಜನಕ ಜಗದೀಶ ಗೋಪಾಲ ಬಾಲ ವೃಜಿನವ ದೂರ ಮಾಡಿ ಮಾಯಸೆರೆಯನು ಬಿಡಿಸಿ ಕುಜನರ ಸಂಗ ಎನ್ನ ಹತ್ರ ಸುಳಿಯದಂತೆ ಮಾಡೊ 2 ಕೇಳಿಸು ನಿನ್ನ ಕಥೆ ನೋಡಿಸು ತವ ಮೂರ್ತಿ ಬಾಳಿಸು ಮನ ನಿನ್ನ ಧ್ಯಾನದಲ್ಲಿ ಫಾಲಕ್ಷ ಸಖ ಪೂರ್ಣ ಜಯೇಶವಿಠಲ ಕಾಲಿಗೆ ಬಿದ್ದವನ ಕೈಹಿಡಿದು ಉದ್ಧರಿಸು 3
--------------
ಜಯೇಶವಿಠಲ
ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಪ ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು 1 ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು 2 ದುರಿತ ಮಾಯಾ ಶರೀರಿ ನಾನು 3 ಭೂರಿ ಕಾರುಣ್ಯಪತಿ ನೀನುಘೋರತರ ಕಾಮಕ್ರೋಧಿಯು ನಾನುಈರೇಳು ಲೋಕವನು ಪೊಡೆಯಲಿಟ್ಟವ ನೀನುಸಾರಿ ಭಜಿಸದ ದುಷ್ಟ ಕರ್ಮಿ ನಾನು 4 ತಿರುಪತಿಯೊಳು ನೆಲಸಿದ ವೆಂಕಟೇಶನು ನೀನುಚರಣಕೆರಗುವ ಕನಕದಾಸನು ನಾನುಬಿರಿದುಳ್ಳ ದೊರೆ ನೀನು ಮೊರೆ ಹೊಕ್ಕೆನಯ್ಯ ನಾನುಮರಣ ಕಾಲಕೆ ಬಂದು ಕಾಯೊ ಹರಿಯೆ5
--------------
ಕನಕದಾಸ