ಪೌರಾಣಿಕ ಕಥನ
ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು
ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು
ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು
ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ
ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1
ಪಾದರಜದಿಂ ಪೊರೆಯುತ
ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ
ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ
ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ
ದಾನವಸೂದನಗಾರತಿಯ ಬೆಳಗಿದರು 2
ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ
ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ
ವನಕ್ಕೆ ತಾ ಸಂಚರಿಸುತ
ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ
ಮಾಣಿಕ್ಯದಾರತಿಯ ಬೆಳಗಿದರು 3
ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ
ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ
ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ
ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ
ಮುತ್ತಿನಾರತಿಯ ಬೆಳಗಿದರು 4
ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ
ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ
ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ
ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ
ಜಾನಕೀಪ್ರಿಯಗಾರತಿಯ ಬೆಳಗಿದರು 5
ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ
ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ
ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ
ಸೀತೆಯ ವಿನಯ ಗೈದಗೆ
ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ
ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ
ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ
ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ
ನಾರಾಯಣ ರೂಪ ಜಯ ಜಯ 7