ಎಲ್ಲಿಗ್ಹೋಗಿ ತಡಮಾಡಿದ್ಯೋ
ಫುಲ್ಲಲೋಚನ ಕೃಷ್ಣ ನೀ ಎಲ್ಲಡಗಿದ್ಯೊ ಧ್ರುವ
ಬಲ್ಲವರಿಗೆ ಬಲ್ಲತನದೋರ ಹೋಗಿದ್ಯೊ
ಅಲ್ಲಿ ಅವರ ಸಹಕಾರ ನೀನಾದ್ಯೊ
ಸುಲ್ಲಭವಾಗಿ ಜ್ಞಾನಕೆ ನೀ ಸಿಲುಕಿದ್ಯೋ
ಒಲ್ಲದ್ಹಾಂಗ್ಹೋಗಿ ಎಲ್ಲರಿಗಾಗಿದ್ಯೊ 1
ಙÁ್ಞನಿಗಳಿಗೆ ಙÁ್ಞನಸಮುದ್ರ ನಾಗಿದ್ಯೊ
ಧ್ಯಾನಮಾಡುವರ ಧ್ಯಾನವೆ ಅಗಿದ್ಯೊ
ಮುನಿಜನರೊಡನೆ ಮಾನಸ ಹಂಸನಾಗಿದ್ಯೊ
ಖೂನದೋರಲು ಹೋಗಿ ನೀನೆ ಆಗಿದ್ಯೊ 2
ಧೃಢಭಕ್ತರೊಡನೆ ಭಿಡಿಯೊಳಗಾಗಿದ್ಯೊ
ಕಡಿಗಾಗದ್ಹಾಂಗ ಕೈಯೊಳಗಾಗಿದ್ಯೊ
ಎಡಬಲಕವರೆಂದು ಬಿಡದ್ಹಾಂಗಾಗಿದ್ಯೊ
ಒಡಲ ಹೊಕ್ಕವರ ಒಡಿಯನಾಗಿದ್ಯೊ 3
ಪ್ರೇಮ ಉಳ್ಳವರ ಪ್ರೀತಿಯೊಳಗಾಗಿದ್ಯೊ
ಸ್ವಾಮಿತನದಲಿ ಸಮೀಪನಾಗಿದ್ಯೊ
ಕಾಮ ಪೂರಿಸಲಿಕೆ ನೇಮವ ಪಿಡಿದ್ಯೊ
ಮಾಮನೋಹರ ನೀ ಸುಗಮವಾಗಿದ್ಯೊ 4
ಇಂದು ನೆನಪಾಯಿತೆಂದು ಓಡಿ ನೀ ಬಂದ್ಯೊ
ಚಂಚವಾಗೆನ್ನೊಳಗಾದ್ಯೊ ನೀ ಬಂದ್ಯೊ
ಕಂದಮಹಿಪತಿಗನುಭವದೋರ ನೀ ಬಂದ್ಯೊ
ತಂದೆ ಸದ್ಗುರು ಅನಂದವ ತಂದ್ಯೊ 5