ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಂಡಿರ್ಯಾ ನೀವು ಕೊಂಡಿರ್ಯಾ ಮಂಡಲದೊಳು ವಸ್ತು ಕೊಂಡಿರ್ಯಾ ಧ್ರುವ ಕೊಳಬೇಕಾದರ ನೀವು ತಿಳಿದುಕೊಂಡು ಬನ್ನಿ 1 ತಿಳಿಯದಿದ್ದರೆ ಖೂನ ಕೇಳಿ ಸದ್ಗುರುವಿನ 2 ಬೆಲೆಯು ಹೇಳುವದಲ್ಲ ನೆಲೆಯ ತಿಳಿಯುವದಲ್ಲ 3 ಕೊಳಗ ಎಣಿಸುವುದಲ್ಲ4 ತೂಕ ಮಾಡುವುದಲ್ಲ ಲೆಕ್ಕ ಇಡುವುದಲ್ಲ 5 ಇಟ್ಟು ಮಾರುವದಲ್ಲ ಕೊಟ್ಟರ್ಹೋಗುವುದಲ್ಲ 6 ಪಂಡಿತರಿಗೆ ಪ್ರಾಣ ಕೊಂಡವರಿಗೆ ತ್ರಾಣ 7 ಹೇಳಿದ ನಾ ನಿಮಗೊಂದು ಸುಲಭವಾಗಿಂದು 8 ಒಮ್ಮನವಾದರ ಸುಮ್ಮನೆಬಾಹುದು 9 ಸಾಧುಸಜ್ಜನರಿಗೆ ಸಾಧ್ಯವಾಗುದಿದು 10ಸಾರಿ ಚೆಲ್ಲೇದ ಮಹಿಪತಿ ವಸ್ತುಮಯಮಿದು11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಲ್ಲುಸಕ್ಕರೆ ಕೊಳ್ಳಿರೊ - ನೀವೆಲ್ಲರು |ಕಲ್ಲುಸಕ್ಕರೆ ಕೊಳ್ಳಿರೊ ಪ.ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು |ಫುಲ್ಲನಾಭಕೃಷ್ಣನ ದಿವ್ಯನಾಮವೆಂಬಅ.ಪಎತ್ತ ಹೇರುವುದಲ್ಲ ಹೊತ್ತು ಮಾರುವುದಲ್ಲ |ಒತ್ತೊತ್ತಿ ಗೋಣಿಯ ತುಂಬುವುದಲ್ಲ ||ಎತ್ತ ಹೋದರು ಮತ್ತೆ ಸುಂಕವು ಇದಕಿಲ್ಲ |ಹತ್ತೆಂಟು ಸಾವಿರಕೆ ಬೆಲೆಯಿಲ್ಲದಂತಹ 1ನಷ್ಟಬೀಳುವುದಲ್ಲ ನಾಶವಾಗುವುದಲ್ಲ |ಕಟ್ಟಿ ಇಟ್ಟರೆ ಮತ್ತೆ ಕೆಡುವುದಲ್ಲ ||ಎಷ್ಟು ದಿನವಿಟ್ಟರೂ ಕೆಟ್ಟು ಹೋಗುವುದಲ್ಲ |ಪಟ್ಟಣದೊಳಗೊಂದು ಲಾಭವೆನಿಸುವಂಥ 2ಸಂತೆಪೇಟೆಗೆ ಹೋಗಿ ಶ್ರಮಪಡಿಸುವುದಲ್ಲ |ಎಂತು ಮಾರಿದರದಕಂತವಿಲ್ಲ ||ಸಂತತ ಪುರಂದರವಿಠಲನ ನಾಮವ |ಎಂತು ನೆನೆಯಲು ಪಾಪ ಪರಿಹಾರವಲ್ಲದೆ 3
--------------
ಪುರಂದರದಾಸರು