ಒಟ್ಟು 7 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ ಪ ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ ಅ ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನುಪಾಯದಿಂದ ಹೇಮದಂತೆ ಬಣ್ಣಗಟ್ಟಿಬಾಯ ಬಡಿದು ತಂದು ತಂದುಕಾಯ ಕಳದೆನಲ್ಲದೆ 1 ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ2 ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆಉಕ್ಕಿ ಸವಿದು ಮನುಜರೊಡನೆಸೊಕ್ಕಿ ದಿನವ ಕಳೆದೆನೆನಗೆತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ3
--------------
ಕನಕದಾಸ
ಈಗಲೊ ಇನ್ನಾವಾಗಲೊ ಈ ತನುವು ಪೋಗದಿರದು ಪ. ಭೋಗದಾಸೆಯ ಬಿಡಿಸಯ್ಯ ನಾಗಶಯನ ನಳಿನನಯನ ಅ.ಪ. ಎಂಬತ್ತು ನಾಲ್ಕು ಲಕ್ಷ ಯೋನಿಗಳಲಿ ಬಂದು ಅಂಬುಜಾಕ್ಷನೊಂದೆನಯ್ಯ ಅಂದಂದು ಮಾಡಿದ ಅಘದಿಕುಂಭೀಪಾಕ ಮೊದಲಾದ ಕುತ್ಸ್ಸಿತ ನರಕದಿ ಬಿದ್ದುಉಂಬ ದುಃಖವ ಬಿಡಿಸಯ್ಯ ಉದಧಿಶಯನ ಪುಣ್ಯಕಥನ 1 ಓದನ ಮಾತ್ರಕ್ಕೆ ಸಭೆಯೊಳುವಾದಿಸುವೆ ವೇದಶಾಸ್ತ್ರ ಉಪನ್ಯಾಸಂಗಳನು ಮಾಡುವೆಕ್ರೋಧರಹಿತನಾಗಿ ಅವರು ಕೊಡಲು ಕೊಂಡಾಡುವೆಆದರಿಸದಿದ್ದರವರ ಬೈದು ಬರುವೆ ಖಿನ್ನನಾಗಿ2 ದೇಶದೇಶಂಗಳಿಗೆ ಧನದ ಆಸೆಗಾಗಿ ಪೋಗಿ ಪೋಗಿಬ್ಯಾಸರದೆ ಕಂಡವರ ಕಾಡಿ ಬೇಡಿ ಬಳಲಿದೆಕಾಸಿನ ಲಾಭವು ಕಾಣೆ ಘಾಸಿಯಾದೆನಯ್ಯ ಶ್ರೀನಿ-ವಾಸ ನಿನ್ನ ಪೂಜಿಸದೆ ಮೋಸಹೋದೆನಯ್ಯ ನಾನು3 ಸ್ನಾನಮೌನಂಗಳನು ಮಾಡುವೆ ಸಕಲ ಜನರ ಮುಂದೆಮಾನವರಿಲ್ಲದಾಗಲೆ ಮೌನವಿಲ್ಲ ಮಂತ್ರವಿಲ್ಲಜ್ಞಾನವ ಪೇಳುವೆ ಮೋಸಕಟ್ಟ[ಲೆ]ಯ ಮಾಡಿಕೊಂಡುಧ್ಯಾನಿಸದೆ ಹೊಟ್ಟೆಯನ್ನು ಹೊರೆವೆ ನಿನ್ನ ಮರೆವೆ4 ಕರ್ಣ ಕೇಳದು ಅನ್ಯವಾರ್ತೆ[ಗೆ] ಹೊತ್ತುಸಾಲದುಇನ್ನು ಹೇಸಿಕೆ ಮನಕೆ ಬಾರದು ಮುಂದಿನ ಗತಿಗೆ ದಾರಿ ತೋರದು 5 ಕಂಬುಕಂಧರ ನಿನ್ನ ನೆನೆಯದೆ 6 ವೃದ್ಧನಾದೆನು ಪಲ್ಗಳೆಲ್ಲ ಬಿದ್ದವು ಕಣ್ಣುಕಾಣಬಾರದುಎದ್ದು ನಿಲ್ಲಲಾರೆನಯ್ಯ ಉದ್ಧರಿಸೊ ಹಯವದನತಿದ್ದಿ ಮನವ ನಿನ್ನ ಪಾದಪದ್ಮವ ನೆನೆವಂತೆ ಮಾಡೊಪೊದ್ದಿದವರ ಪೊರೆವ ಕರುಣಾಸಿಂಧು ಎನಗೆ ನೀನೆ ಬಂಧು 7
--------------
ವಾದಿರಾಜ
ಉಣಲೊಲ್ಲೆ ಯಾಕೋ ಅಣ್ಣಯ್ಯ ಉಣದೆ ಹೀಗೇಕೆ ಹಟ ಮಾಡುವಯ್ಯ ಪ ಉಣದಿರೆ ನನ್ನೆದೆ ತಳಮಳಗೊಳುವುದು ತಣಿಸೋ ಮನವನು ಉಂಡು ಕಂದಯ್ಯ ಅ.ಪ ನೀನನುದಿನವೂ ಉಣದಿದ್ದರೂ ಹೀಗೆ ಏನೂ ಹಸಿವಿಲ್ಲದೆ ಆಟವಾಡುವೆ ಹೇಗೆ ಏನಿದರ ಗುಟ್ಟು ಎಲ್ಲೂಟ ಮಾಡುವೆ ನಾನೇನ ಮಾಡಿಹೆನು ಉಣದಿರಲು ಹೀಗೆ 1 ಗೋಪಾಲಿಕೆಯರಲಿ ಆಕಳ ಹಾಲುಂಡು ಗೋಪಾಲಕರ ಕೂಡೆ ಬೆಣ್ಣೆಯ ಕದ್ದುಂಡು ಪಾಪಿಷ್ಠ ಬಲನೊಡನೆ ಮಣ್ಣನಾದರು ತಿಂದು ಅಪಾಟಿ ಹೊಟ್ಟೆಯ ತುಂಬಿಕೊಂಡಿಹೆಯೇನೊ 2 ಪೂತನಿಯ ಮೊಲೆಯುಂಡು ಜಡಗಟ್ಟಿತೊ ಪ್ರೀತಿಯಲಿ ಆ ಗೋಪಿಯರ ದಿಟ್ಟಿ ತಾಕಿತೊ ಆತುಕೊಂಡಾವ ಗೋಪಿಯು ಕೊಟ್ಟಳೆದೆಹಾಲ ಸೋತು ಹೋದೆನಯ್ಯ ನಿನಗುಣಿಸಲಾಗದೆ 3 ಅಣ್ಣಯ್ಯ ಕುಚೇಲ ನೀಡಿದ ಅವಲಕ್ಕಿಯುಂಡು ಕೃಷ್ಣೆ ಕೊಟ್ಟುಳಿದ ಅಗುಳನ್ನವುಂಡು ಚಿಣ್ಣ ಕಡುಭಕ್ತ ವಿದುರನ ಮನೆಯಲಿ ಹಾಲುಂಡು ಸಣ್ಣ ಹೊಟ್ಟೆ ತುಂಬಿತೆ ಕಂದ ಉಣಲೊಲ್ಲೆ ಯಾಕೊ4 ವಸುಧೆಯೊಳಗೆ ದಾಸರು ನಿನ್ನ ಪೂಜಿಸೆ ಏಸು ಪರಿಯಲಿ ನೈವೇದ್ಯ ನೀಡುವರೊ ಬಿಸಿಬಿಸಿ ಪರಮಾನ್ನ ಸಣ್ಣಕ್ಕಿಯೋಗರವು ಹಸಿದ ನಿನಗೆ ಬಲು ಇಷ್ಟವಾಯಿತೆ ಕೃಷ್ಣ 5 ವರಮಹಾಋಷಿಗಳ ವೇದ ಮಂತ್ರಗಳ ಪರಮ ಭಾಗವತರ ಪಲ್ಲಾಂಡುಗಳು ವರಜಾಜಿಪುರಿವಾಸ ನಿನ್ನ ಸೇವಿಸುತಿರಲು ನಿರುತ ಸಂತುಷ್ಟ ನೀ ಚೆನ್ನಕೇಶವನೆ 6
--------------
ನಾರಾಯಣಶರ್ಮರು
ತಪ್ಪು ತಪ್ಪು ತಪ್ಪು ತಪ್ಪಪರಾಧ ಕೋಟಿಯಸರ್ವಂ ತಪ್ಪನ್ನೆಲ್ಲಾ ಕ್ಷ'ುಸಿ ಒಪ್ಪಿಕೊಳ್ಳಯ್ಯ ಗುರುವೆ ಪದೇಹ ತನ್ನದೆಂಬ ಅಹಂಕಾರದ ತಪ್ಪು ತನ್ನಗೇಹ ಸತಿಸುತರ ಮಮತೆ ಪಾಶದ ತಪ್ಪುಮೋಹ ಮದ ಮಾತ್ಸರ್ಯವ ಭ್ರಮೆಗೊಂಬೊ ತಪ್ಪುಓಹೋ! ವ್ಯರ್ಥಕಾಲವ ಕಳೆದೆನಹುದಯ್ಯ 1ಬಕವೃತ್ತಿಯ ಸೇಮೆಂದ ಮುಕುತನೆಂಬೆನೋ ಹರಿ'ಕಳಮತಿಗಳ ಕೂಡಿ ಯೋಗ್ಯನೆಂಬೆನೋಸಕಲ 'ಷಯಸುಖವನುಂಡು ವೈರಾಗಿಯೆಂಬೆನೋ ಹರಿಭಕ್ತರ ಸಂಗವ ಬಿಟ್ಟು ಜ್ಞಾನಿಯೆಂಬೆನೋ 2ಬರಿಯ ಬ್ರಹ್ಮಜ್ಞಾನದಿಂದ ಮರುಳು ಮಾಡಿದೆಪರಿಪರಿಯ ಭಾವಭೇದಗಳನು ತೋರಿದೆಅರಿಯದ್ಹೋದೆನಯ್ಯ ಶ್ರೀಮದ್ಗುರುವೆ ವಾಸುದೇವಾರ್ಯ ನರಸಾರ್ಯ ಅಮರಗಿರಿನಿಲಯ ಸಕಲ ತಪ್ಪು ಮರೆಯಯ್ಯಾ * 3
--------------
ವೆಂಕಟದಾಸರು
ಮೋಸ ಹೋದೆನಯ್ಯ ಕೃಷ್ಣ ಮೋಸ ಹೋದೆನಯ್ಯಾ ಪ ಈಸು ಸುಲಭನೆಂದು ಪೇಳಿ ದೂರ ಸರಿವೆಯೇಕಯ್ಯ ಇಷ್ಟವಿಲ್ಲವೇ ನಾನು ನಿನಗೆ ಬೇಡವಾದೆನೇ ಅ.ಪ ಉಡಲು ನಿನ್ನವೆಲ್ಲಾವೆಂದು ಸುಳ್ಳು ಹೇಳಿತೇ ವೇದ ಕಡಲು ದಾಟಲು ಬೇರೆ ದಾರಿಯಿಲ್ಲವಯ್ಯ ಒಡಲು ನನ್ನದಾಗಿ ನೊಂದ ನನ್ನ ಕೂಡಯ್ಯ ಒಡೆಯಶೆಲ್ವರಾಯ ಕೂಡಿಕೊಳ್ಳೊ ಅಯ್ಯ1
--------------
ಸಂಪತ್ತಯ್ಯಂಗಾರ್
ಬರಿದೆ ಹೋಯಿತು ಹೊತ್ತು - ಹರಿಯೆ |ಶರೀರವೆ ಸ್ಥಿರವೆಂದು ಮರೆತು ನಾನಿದ್ದೆನೆ ಪಆಸೆಯೆಂಬುದು ಎನ್ನ ಕ್ಲೇಶಪಡಿಸುತಿದೆ |ಗಾಸಿಯಾದೆನೊ ಹರಿಯೆ ||ಶೇಷಶಯನನು ನೀನು ನಿನ್ನ ನಂಬಿದೆ ನಾನು |ನಾಶವಾಯಿತು ದಿನ ಮೋಸ ಹೋದೆನಯ್ಯ 1ಸತಿಸುತರೆಂದೆಂಬ ಅತಿ ಭ್ರಾಂತಿಗೊಳಗಾದೆ |ಮತಿಹೀನ ನಾನಾದೆನೊ ||ಸತತ ನಿರಂತರ ಜಡದೇಹ ನಾನಾದೆ |ರತಿಗೆಳೆಯುತಿದೆ ಮನಸು ಹರಿಸರ್ವೋತ್ತಮನೆ 2ಪರರ ಸೇವೆಯ ಮಾಡಿ ಪರರನೆ ಕೊಂಡಾಡಿ |ಮರೆತೆನೊ ನಿನ್ನ ಧ್ಯಾನ |ಕರುಣದಿಂದಲಿ ಎನ್ನ ಕಾಯ್ದು ನೀ ಸಲಹಯ್ಯ |ಪುರಂದರವಿಠಲ ನಿನ್ನನೆ ನಂಬಿದೆ ನಾನು3
--------------
ಪುರಂದರದಾಸರು