ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುಭಾವದ ನಿಗೂಢ ಮುಂಡಿಗೆಗಳು ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ ಪ ಪರಂಜ್ಯೋತಿ ಪರಬ್ರಹ್ಮ ಪರಮಪುರುಷ ಓಂ ಎಂದುಅ ಹುಟ್ಟು ಬಣ್ಣ ಒಂದರೊಳಗೆ ಕಟ್ಟು ಬಣ್ಣ ಒಂದು ಮಾಡಿಕಟ್ಟಿ ಕುಟ್ಟಿ ಕಾಸಿ ಕರಗಿ ಮೂರು ಬಣ್ಣವಮುಟ್ಟಿ ಮಾಡಿ ನಾಲ್ಕು ಬಣ್ಣ ಒಪ್ಪವಿಕ್ಕಿ ಅದರ ಮೇಲೆಗಟ್ಟಿಯಾಗಿ ನೆಲೆಗೆ ನಿಂತವೈದು ಬಣ್ಣವುಸೃಷ್ಟಿಯಾರೇಳು ಬಣ್ಣ ಎಂಟು ಒಂಬತ್ತರೊಳಗೆ ನೆಟ್ಟನೆ ಹತ್ತು ಹನ್ನೊಂದು ಹನ್ನೆರಡು ತೋರುವಘಟ್ಟಿ ಹದಿಮೂರು ಹದಿನಾಲ್ಕು ಹದಿನೈದರಿಂದಕಟ್ಟಕಡೆಗೆ ನಿಂದ ಹದಿನಾರು ಬಣ್ಣ ಓಂ ಎಂದು 1 ಭದ್ರಕಂಬ ಒಂದರೊಳಗೆ ಉದ್ದವಾದ ಕೊನೆಯ ಮೇಲೆಸಿದ್ಧಿಯಾದ ಚಿಗುರು ಹೂವು ಕಾಯಿ ಹಣ್ಣನುಮೆದ್ದು ಹೋದ ಪಕ್ಷಿ ಬಂದು ಹದ್ದು ಹಿಡಿದು ಉದ್ದಕೆತ್ತಿಬುದ್ಧೀ ಹೀನನಾಗಿ ಬೆಳೆದು ಧರೆಗೆ ಬಿದ್ದುದಕದ್ದು ಮತ್ತೊಬ್ದ ತರುತಿದ್ದ ದಾರಿಯನ್ನು ಕಟ್ಟಿಒದ್ದು ಹಿಡಿದು ಗುದ್ದಿ ನೂಕಿ ಸೆಳೆದುಕೊಂಡುದ ಸಾಧ್ಯವಾಯಿತೆಂದು ತನ್ನ ಮನೆಗೆ ತಂದು ಸತಿಗೆ ಕೊಡಲುಶುದ್ಧವಾಗಿ ಸುಟ್ಟು ಮಡಗಲೆದ್ದು ಹಾರಿ ಹೋಯಿತೆಂದು 2 ತಿಳಿಯುತಿಹುದು ತಿಳಿಯದಿಹುದು ಬೆಳೆಯುತಿಹುದು ಬೆಳೆಯದಿಹುದುಹೊಳೆಯುತಿಹುದು ಹೊಳೆಯದಿಹುದು ಸುಳಿಯದಿಹುದುತಿಳಿದು ನಾಲ್ಕು ದಿಕ್ಕಿನಲ್ಲಿ ಹೊಳೆದು ಎಂಟು ದಿಕ್ಕ ತೋರಿಬಳಸಿ ಸುತ್ತ ತಿರುಗುತಿಹುದು ಬಳಲಿ ಬಳಲದೆಒಳಗೆ ಹೊರಗೆ ತೋರುತಿಹುದು ಅಳಿದ ವಸ್ತು ಮುಟ್ಟದಿಹುದುಕಳವಳಂಗೆ ಎರಡು ಗುಣವ ತೋರಿ ಮೆರೆವುದುತಿಳಿದು ನೋಡೆ ಕೈಗೆ ಸಿಕ್ಕಿ ಒಳಗೆ ಬಯಲ ತೋರುತಿಹುದುಪ್ರಣವ ಒಂದು ಕೋಟಿ ನುಂಗಿ ಉಗುಳಿತಿಪ್ಪುದೋಂ ಎಂದು 3 ತತ್ತಿಯಾದ ಬ್ರಹ್ಮನೀಗೆ ದಿಕ್ಕು ಅಖಿಲಾಂಡವೆಲ್ಲಹೆತ್ತ ತಂದೆಗಾದವನೆ ನಿತ್ಯವುಳ್ಳವ ಸತ್ತು ಹುಟ್ಟಲಿಲ್ಲವೆಂದು ಅತ್ತ ನೋಡಿ ಇತ್ತ ತಿರುಗೆ ತತ್ತಿಯೊಳಗೆ ಬೆಳೆದವೆಲ್ಲ ಸತ್ತವೆನ್ನುತಸತ್ತು ಹೋದ ದೀಪದಂತೆ ಉತ್ಪತ್ತಿಯಾದವಗೆಸತ್ತು ಸತ್ತು ಹುಟ್ಟುವುದು ತಪ್ಪದೆನ್ನುತಎತ್ತಿ ಜಗವ ನುಂಗಿ ತನ್ನ ಹೊಟ್ಟೆಯೊಳಿಂಬಿಟ್ಠುಕೊಂಡುಕತ್ತಲೆಗೆ ಕರ್ತೃವೆಂಬ ಜಗವಸತ್ಯ ಕೇಳಿರೋ ಎಂದು | 4 ಪಂಕಜನ ತಾಯಿ ಸುತನ ಅಂಕದಲ್ಲಿ ಹುಟ್ಟಿ ಜಗವಮಂಕು ಮಾಡುತಿಪ್ಪ ಮಾಯೆ ಹತ್ತು ಶಂಕೆಯಶಂಕೆಕಾರ ಶತ್ರುಮಿತ್ರರಿಬ್ಬರಿಗಾಧಾರವೆಂದುಕುಂಕರದಿಪ್ಪತ್ತೊಂದು ಕೋಟಿ ಪಾಶವುಓಂಕಾರದೊಳಗೆ ಪುಟ್ಟಿ ಓಂಕಾರದೊಳಗೆ ಬೆಳೆದುಓಂಕಾರದೀ ಜಗವ ಎತ್ತಿ ಮೆರೆವುದೋ ಎಂದು 5 ಪ್ರಣವ ಒಂದರೊಳಗೆ ಒಂದು ಕೋಟಿಯನ್ನು ತೋರಿ ಪಡೆಯ (ಕಡೆಯ ?)ಕುಣಿಕೆಯೊಳಗೆ ಎಂಟು ಕೋಟಿಯನ್ನು ತೋರುತತೃಣವ ಹಿಡಿದು ಬರೆಯುತಿಪ್ಪ ಒಂದು ರೋಮ ಕೂಪದಲ್ಲಿಕುಣಿಕೆಯೊಳಗೆ ಜಗದ ಜೀವರಾಶಿ ಎಲ್ಲವಸುಳಿದ ವಿಷ್ಣು ಬ್ರಹ್ಮನೆಂಬ ಹಣೆಯ ಕಣ್ಣ ರುದ್ರನೆಂಬ ಮಣೆಯಗಾರರೆಪ್ಪತ್ತೇಳು ಕೋಟಿ ಸಂಖ್ಯೆಯುಹಣೆಯ ಕಾಣದವರ ಕೀಲಿನೆಣಿಕೆಯಲ್ಲಿ ಹೊಲಬುದಪ್ಪಿಪ್ರಣವ ಒಂದು ಕೇಳುತಿಪ್ಪ ಪರಬ್ರಹ್ಮ ಓಂ ಎಂದು 6 ಸುಳಿ ಕಮಲ ಪಾದ ಮೇಲೆ ಮಸ್ತಕವುತೊಳಲಿ ಕಾಣೆ ವೇದವೆಂದು ಬಳಲಿ ಬಳಲದೆಪ್ರಳಯ ಕೋಟಿ ಪ್ರಾಣಿಗಳಿಗೆ ಹೊಳವುಗಾಣಲೀಸದಂತೆಬೆಳೆದು ಹೋಗುವ ಗತಿಯೆಂಬುದಿತ್ತಲರಿಸುತಕಳವಿನವರು ಬಂದು ಇಳೆಯ ಮೇಲೆ ನಿಂದುಬಿಳಿಗಿರಿವಾಸ ತಿರುಮಲೇಶ ಆದಿಕೇಶವ ತಾನೆಯೆಂದು 7
--------------
ಕನಕದಾಸ
ಒಡವೆ ಹೋಯಿತು ಮನ ದೃಢವಾಯಿತು ಪ ಹಿಡಿದರೋಡುವ ಕಳ್ಳ ಬಿಡದೆ ಕದ್ದುಕೊಂಡು ಹೋದಅ ಆರು ಜೋಡಿನ ಓಲೆಯಿತ್ತು ಮೂರು ಮುತ್ತಿನ ಮೂಗುತಿಯಿತ್ತುಚಾರುತರದ ಇಪ್ಪತ್ನಾಲ್ಕೆಳೆಯ ಸರವು ಒಂದಿತ್ತುಈರೈದು ತಾಳಿಗಳಿತ್ತು ಬಿರುದಿನ ಕಪ್ಪೆಂಟಿತ್ತುದಾರಿ ನೋಡಿಕೊಂಡು ಇದ್ದ ಛಾಯನೆಂಬ ಕಳ್ಳ ಕದ್ದ 1 ಎಪ್ಪತ್ತೆರಡು ಸಾವಿರ ಸೂತ್ರದ ಹಸ್ತಕಟ್ಟು ಎರಡಿತ್ತುಕಪ್ಪು ಬಿಳುಪು ಕೆಂಪು ವರ್ಣದ ಪದಕ ಒಂದಿತ್ತುಒಪ್ಪವಿತ್ತ ಹಸ್ತಕಡಗ ಆಶಾಪಾಶವೆರಡಿತ್ತುಒಪ್ಪವನ್ನು ಸಾಧಿಸಿ ನೇತ್ರನೆಂಬ ಕಳ್ಳ ಕದ್ದ 2 ಹುಟ್ಟು ಸಾವು ಎರಡು ಎಂಬ ಘಟ್ಟಿ ತೂಕದ ನಗವಿತ್ತುಕಷ್ಟ ಸುಖ ಕರ್ಮಗಳೆಂಬ ಸಂಚಿಗಳಿತ್ತುಅಷ್ಟು ಇಷ್ಟು ಚಿಲ್ಲರೆ ಒಡವೆ ಪೆಟ್ಟಿಗೆಯಲಿ ತುಂಬಿತ್ತುದೃಷ್ಟಿ ನೋಡಿಕೊಂಡು ಇದ್ದ ಧರ್ಮನೆಂಬ ಕಳ್ಳ ಕದ್ದ 3 ಎಲ್ಲ ಒಡವೆ ಹೋಯಿತಾದರು ಪುಲ್ಲಳಾಗಿ ಮೆರೆಯುತಾಳೆಚೆಲ್ವನೊಬ್ಬ ಪುರುಷನ ಕಂಡು ತಾಳಲಾರದೆಬಲ್ಲಿದಳು ಈಕೆ ಎಂದು ಇವಳ ಬಗೆ ತಿಳಿಯಿತೆಂದುಕೊಲ್ಲಬಾರದೆನುತ ಹೇಳಿ ಮನೆಯ ಬಿಟ್ಟು ಹೊರಗಟ್ಟಿದ4 ಇಂಥ ಒಡವೆ ಹೋಯಿತೆಂದು ಚೋದ್ಯಪಟ್ಟು ನೋಡುತಿರಲುತಂತ್ರ ಮಾಡಿ ಆದಿಕೇಶವ ಶ್ರೀಹರಿಯು ತಾನೆ ಬಂದುತಂತ್ರವನ್ನು ಹೇಳಿ ಜ್ಞಾನ ಮಾರ್ಗವನ್ನು ಬಿಟ್ಟುಕೊಟ್ಟುಸಂತಸದಿಂದ ಇರು ಎಂದು ಚಿಂತೆ ಬಿಡಿಸಿ ಸಲೆ ಸಲಹಿದ 5
--------------
ಕನಕದಾಸ
ಮರಳುತನವು ಬಂದು ಎನ್ನ ಕೊರಳ ಕೊಯ್ವುದು ದುರುಳನಾಗಿ ಇರುಳು ಹಗಲು ಒರಲುತಿಪ್ಪುದು ಪ ಮಾರಿಯನ್ನು ಮನೆಗೆ ತಂದು ತೋರಿಯಿಡುವುದು ಚೋರರನ್ನು ತಂದು ತನಗೆ ಸೇರಿ ಕೊಡುವುದು ದೂರುಬಪ್ಪ ದಾರಿಯನ್ನು ಸೇರಿ ನಡೆವುದು ಸಾರಿ ಪರನಾರಿಯನ್ನು ಸೂರೆಗೊಂಬುದು 1 ಹೆಂಡತಿಯ ಸುಲಿದು ತನ್ನ ಮಿಂಡಿಗಿಡುವುದು ಕಂಡು ಕಂಡು ಹರುಷ ತಾಳಿ ಕೊಂಡುಯಿರುವುದು ಭಂಡತನದಿ ಕೊಂದು ದೂರ ಕೊಂಡು ಪೋಪುದು ಉಂಡು ಉಡುವ ಹರುಷ ಸರಿಯ ಮಿಂಡಿಗಪ್ಪುದು 2 ಸೂಳೆಯನ್ನು ಕಂಡು ಹರುಷ ತಾಳಿಯಿರುವುದು ವೇಳೆಗವಳು ಬಾರದಿರಲು ಚೀ[ರಿ]1ಯಳುವುದು ಹಾಳು ಬದುಕಿನೊಳಗೆ ಬಹಳ ಚಾಳು ತೋರ್ಪುದು ಖೂಳರನ್ನು ಕರೆದು ಅನ್ನ ಪಾಲನೆರೆವುದು 3 ಇಲಿಯು ಹೆಚ್ಚಿತೆಂದು ಮನೆಗೆ ಉರಿಯನಿಡುವುದು ಚಳಿಯು ಹೋಯಿತೆಂದು ಮನದಿ ನಲಿವುತಿರುವುದು ಬಿಳಿದು ಬೂದಿಯನ್ನು ಕೊಂಡು ಹೊಳೆಗೆ ಬಿಡುವುದು ಸ್ಥಳವ ಕೆಡಿಸಿ ಕುಲವನೆಲ್ಲ ಬಳಕೆ ತೀರ್ಪುದು 4 ಹೆತ್ತ ಮಗನ ತೊರೆದು ತಾನು ದತ್ತ ತಪ್ಪುದು ಸತ್ತ ಎಮ್ಮೆ ಹಾಲು ಹತ್ತು ಸೇರಿಗಳವುದು ಕತ್ತಿಯನ್ನು ಬಿಸುಟು ಒರೆಯ ಹತ್ತಿರಿಡುವುದು ಶತ್ರುವಾಗ ಬಂದ ತನ್ನ ಒತ್ತಿ ನಿಲುವುದು 5 ಗಾಳವಿಲ್ಲದೆ ಮೀನುಗಳ ಮೇಲೆ ತೆಗೆವುದು ಕೋಲುಯಿಲ್ಲದ ಕೊಲೆಗಳೆನ್ನ ಮೇಲೆ ಬೀಳ್ವುದು ಸಾಲವನ್ನು ಕೊಟ್ಟವರು ಸಾಯಲೆಂಬುದು ಕಾಲನೊಳು ಕೈಯ ಕಟ್ಟಿ ಶೂಲೆ ತಪ್ಪುದು 6 ಸರ್ವತಂತ್ರವೆಲ್ಲ ಹರಿಯ ಹತ್ತಿರಿಡುವುದು ಗರ್ವವನ್ನು ತೋರಲವನ ಸುತ್ತಿ ಬರುವುದು ಇರುವೆಯಂತೆ ಮೈಯನೆಲ್ಲ ಕುತ್ತಿ ತರಿವುದು ತೋರ ವರಾಹತಿಮ್ಮಪ್ಪನ ಎತ್ತಿ ನೆನೆವುದು 7
--------------
ವರಹತಿಮ್ಮಪ್ಪ