ಏನು ಭ್ರಮೆ ಮನುಜರಿಗೆ ಎಷ್ಟು ಮಮತೆ ಪ್ರಕೃತಿಯಲಿಮೀನು ಗಾಳವÀ ನುಂಗಿ ಮೋಸಹೋದ ತೆರನಂತೆ ಧ್ರುವ
ಸತಿ ನನ್ನ ಸುತರೆಂದೆನಿಸಿಹೊನ್ನುಗಳ ಗಳಿಸಿ ಹೆಚ್ಚಾಗಿ ಹೋರ್ಯಾಡಿಸಣ್ಣವರ ಮದುವೆ ಸಂಭ್ರಮದಿ ಮಾಡುವೆನೆಂದುಅನ್ನ ಮೊದಲು ಕಾಣದೆ ಅಂತರ ಪಿಶಾಚಿಯಂತೆ 1
ಬಲುವೋದಿಕೆಯಲ್ಲಿ ಬಲ್ಲವರೆನಿಸಬೇಕೆನುತಹಲವು ಬುದ್ಧಿಯಲ್ಲಿ ಹಿರ್ರನೆ ಹಿಗ್ಗುತಮಲಿನ ಮನಸಿನಜ್ಞಾನದಲಿ ತಾನರಿಯದೆ 2
ಮಿಗಿಲು ಆಸೆಗೆ ಬಿದ್ದು ಬಗೆ ಬಗೆ ಹೂಣಿಕೆಯಲಿಹೊಗದಲ್ಲಿ ಹೊಗುವರು ಹೂ ಬಿಟ್ಟು ತಿಳಿಯರುಖಗವಾಹನ ಮುದ್ದು ರಂಗವಿಠಲನ ನಾಮ ಸ್ಮರಿಸಲುವಿಗಡ ಸಂಸಾರ ಹಗರಣ ನೀರಗುಳ್ಳೆಯಂತೆ3