ತ್ರಾಹಿ ತ್ರಾಹಿ ಎನ್ನಿರೊ ತ್ರೈಲೋಕ್ಯದೊಡಿಯಗೆ
ತ್ರಾಹಿ ತ್ರಾಹಿ ಎನ್ನಿರೊ ತಾರಕ ಬ್ರಹ್ಮಗೆ ಧ್ರುವ
ಕಾಮ ಕ್ರೋಧ ಸುಟ್ಟು ಹೋಳಿಯಾಡುವ ಬನ್ನಿರೊ
ಪ್ರೇಮ ಪ್ರೀತಿಯಿಂದ ಕುಣಿದಾಡುವ ಬನ್ನಿರೊ 1
ಭೇದವಳಿದು ಸಾಧು ಜನರ ಕೂಡಿಕೊಂಬ ಬನ್ನಿರೊ
ಮದ ಮತ್ಸರವ ಬೂದಿ ಮಾಡಿಚೆಲ್ಲುವ ಬನ್ನಿರೊ 2
ಏಕರಂಗವಾಗಿ ಓಕುಳ್ಯಾಡವ ಬನ್ನಿರೊ
ಜೀಕಳಿಯ ಮಾಡಿ ಮಾಯ ಮೋಹ ಎಸುವ ಬನ್ನಿರೊ 3
ಎಲ್ಲರೊಳಗಿಹ ನಮ್ಮ ಪುಲ್ಲನಾಭ ಚಲುವನೊ
ಬಲ್ಲ ಮಹಿಮನಿಗೆ ನೆಲೆಯ ನೋಡಿ ಒಲಿವನೊ 4
ಹೋಳಿಯಾಡಿದನು ನೋಡಿ ಇಳಿಯೊಳಗ ಮಹಿಪತಿಯು
ಕಳೆದು ಕಲ್ಪನೆ ಕೋಟಿಲಿಂದ ಗೆದ್ದ ನೋಡಿರೊ 5