ಮುಸುಕು ತೆಗೆದರೆ ಬೆನ್ನಲ ನಾಲಗೆ ಇದರಹೆಸರು ಬಲ್ಲವರುಂಟೆ ಪೇಳಿರಿ ಜನರೆ ಪ.ಸತ್ತಿಗೆ ತಲೆಯವಳು ನೆತ್ತಿಲಿ ಬಾಲದವಳುಕತ್ತಿನ ಕೆಳಗೆ ಕಪ್ಪಿನ ಕೊಪ್ಪಿನವಳುಸುತ್ತೇಳು ಮೈಗೆರಡು ಜೋಡು ಬಂಗಾರಸೃಷ್ಟಿಯೊಳಗೆ ಇದರ ಹೆಸರ ಬಲ್ಲವರುಂಟೆ 1ಜಡೆ ಮೆರಗುವ ಬಾಲೆ ಒಡಲೊಳಗೆ ಕರುಳಿಲ್ಲಬಿಡದೆ ಪಟ್ಟಾವಳಿಯುಟ್ಟು ಬಲ್ಲವಳುಅಡವಿಯೊಳಗೆ ಪುಟ್ಟಿ ಪಡೆದಳು ದೇಹವಪೊಡವಿಯೊಳಗೆ ಇದರ ಹೆಸರು ಬಲ್ಲವರುಂಟೆ 2ಬೇರಾಗಿ ಬೆರಳೈದು ಮೂರು ತಾನೊಂದಾಗಿಯಾರು ಕಂಡರು ಎಂದು ನಸುನಗುತಸೇರಿದ ಭಕುತರ ಪೊರೆವ ರಂಗಯ್ಯನಸೇರಿ ಮೆಚ್ಚಿಸಿಕೊಳ್ಳೊ ಪುರಂದರವಿಠಲ 3